ಮದ್ದೂರಿನಲ್ಲಿ ಸಂಭ್ರಮದ ಯುಗಾದಿ- ವಿವಿಧ ಸನ್ನಿಧಿಗಳಲ್ಲಿ ಕೈಂಕರ್ಯ

31M.D.R. 10
Published on

ಮದ್ದೂರು : ಯುಗಾದಿ ಹಬ್ಬದ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹಸ್ವಾಮಿ, ಶ್ರೀ ಹೊಳೆ ಆಂಜನೇಯಸ್ವಾಮಿ, ಕಾಶಿ ವಿಶ್ವೇಶ್ವರಸ್ವಾಮಿ ಹಾಗೂ ತಾಲೂಕಿನ ಚಿಕ್ಕಂಕನಹಳ್ಳಿ ಗ್ರಾಮದ ನಂದಿ ಬಸವೇಶ್ವರಸ್ವಾಮಿ, ವೈದ್ಯನಾಥಪುರ ಗ್ರಾಮದ ವೈದ್ಯನಾಥೇಶ್ವರ ದೇಗುಲ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನೂರಾರು ಭಕ್ತರು ಪೂಜೆ ಸಮರ್ಪಿಸಿ, ತೀರ್ಥ, ಪ್ರಸಾದ ಸ್ವೀಕರಿಸಿ ಧನ್ಯತೆ ಮೆರೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net