ಎನ್‌ಟಿಎ ಎಜೆನ್ಸಿಯನ್ನು ರದ್ದುಗೊಳಿಸಿ

news
ಹೊಸಪೇಟೆ ತಹಸೀಲ್ ಕಚೇರಿ ಮುಂದೆ ಸೋಮವಾರ ಎಐಡಿವೈಒ, ಎಐಡಿಎಸ್ಒಯಿಂದ ಪ್ರತಿಭಟನೆ ನಡೆಯಿತು.
Published on

ಹೊಸಪೇಟೆ: ಯುಜಿಸಿ ನೆಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಭಾಗಿಯಾದವರಿಗೆ ಬಂಧಿಸಿ ಹಾಗೂ ಎನ್‌ಟಿಎ ಎಜೆನ್ಸಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಎಐಡಿವೈಒ, ಎಐಡಿಎಸ್‌ಒ ಸಂಘಟನೆಯಿAದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ಸೋಮವಾರ ಪ್ರತಿಭಟನೆ ನಡೆಯಿತು.

ಎಐಡಿವೈಒ ರಾಜ್ಯ ಸಮಿತಿ ಸದಸ್ಯ ಜಗದೀಶ್ ಮಾತನಾಡಿ, ಎನ್‌ಟಿಎ ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಹಾಗೂ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ. ಆದರೆ ಇದರಿಂದ 9 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ. ಈ ವರ್ಷದಿಂದ ಪಿಹೆಚ್‌ಡಿ ಪ್ರವೇಶಕ್ಕೂ ನೆಟ್ ಪರೀಕ್ಷೆ ಪಾಸಾಗುವುದು ಕಡ್ಡಾಯ ಮಾಡಿದ್ದರಿಂದಾಗಿ ಪಿಹೆಚ್‌ಡಿ ಪ್ರವೇಶಕ್ಕಾಗಿಕಾದು ಕುಳಿತ ವಿದ್ಯಾರ್ಥಿಗಳು ಹಾಗೂ ಮಹಾವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹತೆ ಪಡೆಯುವುದಕ್ಕಾಗಿ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಎಲ್ಲಾ ನೇಮಕಾತಿಗಳಲ್ಲೂ ನಡೆಯುವ ಭ್ರಷ್ಟಾಚಾರದ ಭೂತ ಈಗ ಈ ಪರೀಕ್ಷೆಗೂ ಬಡಿದುಕೊಂಡಿದೆ. ವೈದ್ಯಕೀಯ ವೃತ್ತಿಪರ ಶಿಕ್ಷಣಕ್ಕೆ ಪ್ರವೇಶ ಪರೀಕ್ಷೆ ನೀಟಾಗಿ ನಡೆಯಲಿಲ್ಲ. ನೆಟ್ ನೆಟ್ಟಗಾಗಲಿಲ್ಲ ಎಂದು ವ್ಯಂಗ್ಯವಾಡುವAತಹ ಸ್ಥಿತಿ ಶಿಕ್ಷಣ ವ್ಯವಸ್ಥೆ ತಲುಪಿರುವುದು ದುರಂತ ಎಂದರು.

ಎಐಡಿಎಸ್‌ಒನ ಜಿಲ್ಲಾ ಸಮಿತಿ ಸದಸ್ಯೆ ಎ.ಶಾಂತಿ ಮಾತನಾಡಿ, ಅಕ್ರಮಗಳ ಸರಮಾಲೆ ದುಡ್ಡಿದ್ದವರಿಗೆ ಉದ್ಯೋಗ, ಶಿಕ್ಷಣ ಎನ್ನುವ ವಾತಾವರಣವನ್ನು ಸೃಷ್ಟಿಸಿವೆ. ಜನಸಾಮಾನ್ಯರ ಬದುಕನ್ನು ಬೀದಿಗೆ ತಳ್ಳಿವೆ. ಲಕ್ಷಾಂತರ ಪರೀಕ್ಷಾರ್ಥಿಗಳ ಶ್ರಮವನ್ನು ಹಾಳು ಮಾಡಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ನಿದರ್ಶನೀಯ ಶಿಕ್ಷೆ ವಿಧಿಸಬೇಕು ಎಂದರು.

ಪ್ರಮುಖರಾದ ಶಿವಕುಮಾರ್, ಡಾ.ಸಂದೀಪ್, ಡಾ.ದೊಡ್ಡಬಸವ, ಡಾ.ಮಹೇಶ್, ಡಾ.ವೀರೂಪಾಕ್ಷ, ಡಾ.ಸಿದ್ದಪ್ಪ, ಪ್ರಮೋದ್, ಮನೋಜ್, ರಮೇಶ್, ಪ್ರೇಮಾ, ಕೀರ್ತಿ, ಪಾಲಾಕ್ಷ, ಅಜಯ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net