ರೋಗನಿರೋಧಕ ಅವ್ಯವಸ್ಥೆಯಿಂದ ಅಟೋಇಮ್ಯೂನ್ ವ್ಯಾಧಿ : ಡಾ.ಶಿವರಾಜ್ ಪಡಿಯಾರ್ ಮಾಹಿತಿ

6
Published on

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ.ಹೆಗ್ಗಡೆಯವರ ಆದೇಶದಂತೆ ಮತ್ತು ಡಿ.ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ, ಹೇಮಾವತಿ ವೀ.ಹೆಗ್ಗಡೆಯವರ ಹುಟ್ಟುಹಬ್ಬದ ಸಂದರ್ಭ ಸಂಧಿವಾತ ಮತ್ತು ಅಟೋಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಬುಧವಾರ ನಡೆಯಿತು.

ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ಸಂಧಿವಾತ ತಜ್ಞ ಡಾ.ಶಿವರಾಜ್ ಪಡಿಯಾರ್ ಶಿಬಿರ ಉದ್ಘಾಟಿಸಿ ಮಾತನಾಡಿ, ದೇಹದ ರೋಗನಿರೋಧಕ ಅವ್ಯವಸ್ಥೆಯಿಂದ ಆರೋಗ್ಯಕರ ಅಂಗಾಂಶಗಳ ಮೇಲೆ ಪರಿಣಾಮ ಬೀಳುತ್ತದೆ. ಇದರಿಂದ ಆಟೋಇಮ್ಯೂನ್ ಕಾಯಿಲೆಗಳು ಸಂಭವಿಸುತ್ತವೆ. ರುಮಟಾಯ್ಡ ಸಂಧಿವಾತ, ಮಲ್ಟಿಪಲ್ ಸ್ಕೈರೋಸಿಸ್ ಇತ್ಯಾದಿ ತೊಂದರೆ ಕಾಣಿಸಿಕೊಳ್ಳುತ್ತವೆ. ಈ ಎಲ್ಲ ತೊಂದರೆಗಳಿಗೆ ಈ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ.ಪ್ರತೀಕ್ಷ್ ಪಿ ಮಾತನಾಡಿ, ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞ ಡಾ.ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಸಂಧಿವಾತ, ಅಟೋಇಮ್ಯೂನ್ ತೊಂದರೆಗಳಿಗೆ ಚಿಕಿತ್ಸೆ ನೀಡುವ ನುರಿತ ತಜ್ಞ ವೈದ್ಯರಾಗಿದ್ದು, ಎಲ್ಲರೂ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಷಿಯನ್ ಡಾ.ಯಶಸ್ವಿನಿ, ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ.ರಜತ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ಸಂಧಿವಾತ ತಜ್ಞ ಡಾ.ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಭಾಗವಹಿಸಿದ್ದರು.

ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ, ಆರ್ಥೈಟಿಸ್, ಸ್ಟಾಂಡಿಲೋಆರ್ಥೈಟಿಸ್, ಸಿಸ್ಟಮಿಕ್ ಲೂಪಸ್‌ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಚಿಕಿತ್ಸೆ ಪಡೆದರು. ಇನ್ಶೂರೆನ್ಸ್ ವಿಭಾಗದ ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿದರು.

ಎಲ್ಲ ಕಾಯಿಲೆಗಳಿಗೆ ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಡಾ.ಹೆಗ್ಗಡೆಯವರ ಬಯಕೆ. ಡಾ.ಹೆಗ್ಗಡೆಯವರ ಆದೇಶದಂತೆ ಹಲವಾರು ಉಚಿತ ಶಿಬಿರ ನಡೆಸಲಾಗುತ್ತಿದೆ. ಹಲವಾರು ಜನರ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗುವುದರಿಂದ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಕಡಿಮೆಯಾಗುವುದಲ್ಲದೆ ಅತ್ಯಂತ ಶೀಘ್ರವಾಗಿ ಗುಣಮುಖರಾಗುತ್ತಾರೆ. ಎಂ.ಜನಾರ್ದನ್ ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ https://www.vijayavani.net/karavali-accident-to-bike-of-the-rider-sathish-acharya https://www.vijayavani.net/respect-for-achievers

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net