ಸಮೃದ್ಧ ಬೆಳೆ ಕೈಗೆ ಸಿಗುವಂತಾಗಲಿ

JLR ph 1 May 22 Karigallu Stapane
Published on

ಜಗಳೂರು: ಕರಿಗಲ್ಲು ಪ್ರತಿಷ್ಠಾಪನೆಯಿಂದ ಇಡೀ ಊರಿಗೆ ಒಳ್ಳೆಯದಾಗಲಿ, ಸಕಾಲಕ್ಕೆ ಮಳೆಯಾಗಿ ಸಮೃದ್ಧ ಬೆಳೆ ಕೈಗೆ ಸಿಗುವಂತಾಗಲಿ ಎಂದು ಉಜ್ಜಯಿನಿ ಮಠದ ಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹಾರೈಸಿದರು.

ತಾಲೂಕಿನ ದೊಡ್ಡಬೊಮ್ಮಹಳ್ಳಿ ಗ್ರಾಮದಲ್ಲಿ ಗುರುವಾರ ನೂತನ ಕರಿಗಲ್ಲು ಪ್ರತಿಷ್ಠಾಪನಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ಇಡೀ ಗ್ರಾಮ ಸುಭೀಕ್ಷೆಯಾಗಿರಬೇಕು, ಯಾವುದೇ ಕೆಡುಕು, ಮರಣಗಳು ಆಗಬಾರದು ಎಂಬ ಕಾರಣಕ್ಕೆ ಸನಾತನ ಕಾಲದಿಂದ ಪ್ರತಿ ಗ್ರಾಮದಲ್ಲೂ ಕರಿಗಲ್ಲು ಸ್ಥಾಪನೆ ಮಾಡುವ ಪದ್ಧತಿ ನಡೆದುಕೊಂಡು ಬಂದಿದೆ ಎಂದರು.

ಗ್ರಾಮದಲ್ಲಿ ಒಗ್ಗಟ್ಟು ಇದ್ದರೆ ಇಂತಹ ಧಾರ್ವಿುಕ ಕಾರ್ಯಕ್ರಮಗಳು ನಡೆಯಲು ಸಾಧ್ಯ. ಇದರ ಜತೆಗೆ ಶಿಕ್ಷಣಕ್ಕೂ ಆದ್ಯತೆ ನೀಡಿ ಮಕ್ಕಳನ್ನು ಓದಿಸಿ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡಬೇಕು ಎಂದು ಸಲಹೆ ನೀಡಿದರು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ಗ್ರಾಮದಲ್ಲಿ ಸರ್ವ ಸಮುದಾಯದವರು ಸೇರಿ ಕರಿಗಲ್ಲು ಸ್ಥಾಪನೆ ಮಾಡುವ ಮೂಲಕ ನಮ್ಮ ಸನಾತನ ಧರ್ಮಕ್ಕೆ ಎಷ್ಟು ಮಹತ್ವವಿದೆ ಎನ್ನುವುದನ್ನು ಎತ್ತಿ ತೋರಿಸುತ್ತಿದೆ ಎಂದರು.

ಕೊಟ್ಟೂರು ಕಟ್ಟಿಮನಿ ಹಿರೇಮಠದ ಯೋಗರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗ ಮಡಿವಾಳ ಮಠದ ಮಡಿವಾಳ ಮಾಚೀದೇವ ಸ್ವಾಮೀಜಿ, ಕಾನಮಡುಗು ದಾಸೋಹ ಮಠದ ಐಮಡಿ ಶರಣಾರ್ಯರು, ಗ್ರಾಪಂ ಸದಸ್ಯರಾದ ಶರಣಪ್ಪ, ಬೋರಪ್ಪ ಸೇರಿ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net