ಸ್ಪರ್ಧಾತ್ಮಕ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Published on

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 11 ಸಾವಿರಕ್ಕೂ ಹೆಚ್ಚು ಎನ್‌ಟಿಪಿಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದ್ದು ಶೀಘ್ರದಲ್ಲೆ ಮತ್ತೆ 30 ಸಾವಿರಕ್ಕೂ ಹೆಚ್ಚು ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಕರೆಯಲಿದೆ. ಹಾಗೂ ಸಿಬ್ಬಂದಿ ನೇಮಕಾತಿ ಆಯೋಗ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಸುಮಾರು 30 ಸಾವಿರಕ್ಕೂ ಹೆಚ್ಚು ಕಾನ್ ಸ್ಟೇಬಲ್‌ಗಳ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ನಿಟ್ಟಿನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉಜ್ವಲ ಅಕಾಡೆಮಿ ಎರಡು ವಾರಗಳ ಕಾಲ ಉಚಿತವಾಗಿ ಆನ್ ಲೈನ್ ಮತ್ತು ಆಫ್‌ಲೈನ್ ಎರಡೂ ಮಾದರಿಯಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.

ವಿ.ಸೂಚನೆ: ತರಬೇತಿಯು ಅ.7 ರಿಂದ ಪ್ರಾರಂಭವಾಗಲಿದ್ದು, ಹೆಚ್ಚಿನ ಮಾಹಿತಿಗೆ ಉಜ್ವಲ ಅಕಾಡೆಮಿ, ನಂ.115, 16ನೇ ಮುಖ್ಯರಸ್ತೆ, ವಿಜಯನಗರ ಬೆಂಗಳೂರು ದೂ: 7795959079 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net