ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ

ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿ.ಜಿ.ಎಸ್ ಬಾಲಜಗತ್ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಲಾಯಿತು. ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ವಿ.ಆಶಾ ಇತರರಿದ್ದರು.
ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿ.ಜಿ.ಎಸ್ ಬಾಲಜಗತ್ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಲಾಯಿತು. ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ವಿ.ಆಶಾ ಇತರರಿದ್ದರು.
Published on

ಕೆ.ಆರ್.ಸಾಗರ: ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿ.ಜಿ.ಎಸ್. ಬಾಲಜಗತ್ ಶಾಲೆಯಲ್ಲಿ ಇತ್ತೀಚೆಗೆ ಸರಸ್ವತಿ ಪೂಜೆ ಮತ್ತು ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಕಾರ್ಯದರ್ಶಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಿದರು.

ಮಕ್ಕಳಿಗೆ ಆರಂಭದಿಂದಲೇ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಬಗ್ಗೆ ಪಾಲಕರು ಗಮನ ಹರಿಸಬೇಕು. ಇದರೊಂದಿಗೆ ಮಕ್ಕಳ ಬಾಲ್ಯದ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕು. ಪುಟ್ಟ ಮಕ್ಕಳಿಗೆ ಯಾವುದೇ ಒತ್ತಡವಾಗದ ರೀತಿಯಲ್ಲಿ ಕಲಿಕೆ ನೀಡುವತ್ತ ಶಿಕ್ಷಕರ ಗಮನ ಹರಿಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶ್ರೀಗಳು ಪ್ರಶಸ್ತಿ ವಿತರಣೆ ಮಾಡಿದರು. ಬಳಿಕ ಯುಕೆಜಿ ಮಕ್ಕಳು ಅನಿಸಿಕೆ ವ್ಯಕ್ತಪಡಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕಮ ನಡೆಯಿತು. ಶಾಲೆ ಮುಖ್ಯ ಶಿಕ್ಷಕಿ ವಿ.ಆಶಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net