ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜಾ ಕಾರ್ಯಕ್ರಮ

uma
Published on

ಕುಶಾಲನಗರ:

ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜಾ ಕಾರ್ಯಕ್ರಮ ಶ್ರಧ್ಧಾಭಕ್ತಿಯಿಂದ ಸೋಮವಾರ ನಡೆಯಿತು.

ವಾರ್ಷಿಕ ಪೂಜ್ಯೋತ್ಸವದ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ಉಪ ದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ, ಇತ್ಯಾದಿ ಪೂಜಾ ಕೈಂಕರ್ಯಗಳು ಕೇರಳ ಶಿವಕುಮಾರ್, ಸಜೀ ತಂಡದವರ ನೇತೃತ್ವದಲ್ಲಿ ನಡೆಯಿತು.

ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂರ್ತಪಣೆ ಏರ್ಪಡಿಸಲಾಗಿತ್ತು. ವಾರ್ಷಿಕ ಪೂಜೋತ್ಸವಕ್ಕೆ ಕೂಡಿಗೆ, ಕುಶಾಲನಗರ, ಮದಲಾಪುರ, ಹಾರಂಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿದ್ದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಈ ಸಂದರ್ಭ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಸಂಜೆ ದೀಪಾಲಂಕಾರ ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು.

ಈ ಸಂದರ್ಭ ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net