ಸುಮ್ಮನೆ ಬಿಡಬೇಡಿ... ಸಹಪಾಠಿಗಳ ಕಿರುಕುಳ ತಾಳಲಾರದೆ ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಸಾವಿಗೆ ಶರಣು! Student Death

Student Death
Published on

Student Death: ಸಹಪಾಠಿಗಳ ಕಿರುಕುಳ ತಾಳಲಾರದೆ ಡೆತ್​ನೋಟ್ ಬರೆದಿಟ್ಟು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ಬಾಗಲಕೋಟೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಅಂಜಲಿ ಮುಂಡಾಸ್​ (21) ಎಂದು ಗುರುತಿಸಲಾಗಿದೆ. ಈಕೆ ಗುಳೇದಗುಡ್ಡ ಪಟ್ಟಣದ ಭಂಡಾರಿ ಕಾಲೇಜಿನಲ್ಲಿ ಬಿಎ 4ನೇ ಸೆಮಿಸ್ಟರ್ ವಿದ್ಯಾರ್ಥಿನಿಯಾಗಿದ್ದಳು. ಆತ್ಮಹತ್ಯೆಗೂ ಮುನ್ನ ಡೆತ್​ನೋಟ್​ ಬರೆದಿರುವ ಅಂಜಲಿ, ಸಹಪಾಠಿಗಳು ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಮಾಡಿದ್ದಾರೆ.

ಡೆತ್​ನೋಟ್​ನಲ್ಲಿ ಏನಿದೆ?

ನನ್ನು ಸಾವಿಗೆ ಕಾರಣವಾದ ಈ ಮೂವರು ವ್ಯಕ್ತಿಗಳು ನನ್ನ ಜೀವನದಲ್ಲಿ ಪರಿಣಾಮ ಬೀರಿದ್ದಾರೆ. ಅವರುಗಳೆಂದರೆ, ವರ್ಷಾ, ಪ್ರದೀಪ್​ ಮತ್ತು ಇನ್ನಿತರ ಸ್ನೇಹಿತರು. ಇವರೆಲ್ಲ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಇವರೆಲ್ಲ ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೇ ಬಿಡಬಾರದು ಎಂದಿರುವ ಅಂಜಲಿ, ಎಲ್ಲರಿಗೂ ಗುಡ್​ ಬೈ ಹೇಳುತ್ತಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೆ, ತಾನು ಆರೋಪ ಮಾಡಿರುವ ವರ್ಷಾ ಮತ್ತು ಪ್ರದೀಪ್​ ಅವರ ಫೋನ್​ ನಂಬರ್​ ಸಹ ಬರೆದಿದ್ದಾರೆ.

ಸದ್ಯ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್​ಐಆರ್​ ದಾಖಲಾಗಿದ್ದು, ಡೆತ್​ನೋಟ್​ ಆಧಾರದ ಮೇಲೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಇತ್ತ ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net