

ಕುಂದಗೋಳ: ಸಾಲಬಾಧೆ ತಾಳಲಾರದೆ ತಾಲೂಕಿನ ತರ್ಲಘಟ್ಟ ಗ್ರಾಮದ ರೈತರೊಬ್ಬರು ಗುರುವಾರ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈತ ರುದ್ರಗೌಡ ಹುತ್ತನಗೌಡ ರಾಮನಗೌಡ್ರ (62) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಇವರು ವಿವಿಧ ಬ್ಯಾಂಕ್ಗಳಲ್ಲಿ 7 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸತತ ಮಳೆಯಿಂದಾಗಿ ಜಮೀನಿನಲ್ಲಿ ಬೆಳೆದಿದ್ದ ಗೋವಿನ ಜೋಳದ ಬೆಳೆ ಸಂಪೂರ್ಣ ನಾಶವಾಗಿತ್ತು.
ಸಾಲ ತೀರಿಸುವುದು ಹೇಗೆಂದು ಮಾನಸಿಕ ಒತ್ತಡಕ್ಕೆ ಒಳಗಾಗಿ ಗ್ರಾಮದ ಬಸ್ ನಿಲ್ದಾಣ ಬಳಿಯಿರುವ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಡಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.