ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

Suicide
Published on

ಕುಂದಗೋಳ: ಕಳೆದ ನಾಲ್ಕೈದು ವರ್ಷಗಳಿಂದ ಅತಿವೃಷ್ಟಿಯಿಂದ ಮನನೊಂದು ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಾಲೂಕಿನ ಯಲಿವಾಳ ಗ್ರಾಮದಲ್ಲಿ ಜರುಗಿದೆ. ಯಲಿವಾಳದ ರೈತ ಬಸವರಾಜ ವೀರಪ್ಪ ದಾನಪ್ಪನವರ (30) ಆತ್ಮಹತ್ಯೆ ಮಾಡಿಕೊಂಡವರು. ಕಾಫೋರೇಷನ್ ಬ್ಯಾಂಕ್​ನಲ್ಲಿ ಕೃಷಿ ಚಟುವಟಿಕೆಗಾಗಿ 15 ಲಕ್ಷ ರೂ. ಹಾಗೂ ಯಲಿವಾಳದ ಪ್ರಾಥಮಿಕ ಸಹಕಾರಿ ಸಂಘದಲ್ಲಿ 2 ಲಕ್ಷ ರೂ. ಹಾಗೂ ಕುಟುಂಬ ನಿರ್ವಹಣೆಗಾಗಿ ಶಿಗ್ಗಾಂವಿಯ ಐಡಿಎಫ್​ಸಿ ಬ್ಯಾಂಕ್​ನಲ್ಲಿ 10 ಲಕ್ಷ ರೂಪಾಯಿ ಸಾಲವನ್ನು ಪಡೆದಿದ್ದರು. ನಾಲ್ಕೈದು ವರ್ಷಗಳ ಅತಿವೃಷ್ಟಿಯಿಂದ ಮಾಡಿದ ಸಾಲ ಹೇಗೆ ತೀರಿಸುವುದೆಂದು ಹೆದರಿದ್ದ. ಜು. 18ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಅವರನ್ನು ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net