ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Boy Suside+1
Published on

ರಾಣೆಬೆನ್ನೂರ: ಮನೆ ರೀಪೇರಿ ಮಾಡಲು ತೆಗೆದುಕೊಂಡ ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಾಗೇನಹಳ್ಳಿಯಲ್ಲಿ ಬುಧವಾರ ನಡೆದಿದೆ.

ಹನುಮಂತ ಫಕ್ಕೀರಪ್ಪ ಜಾಡರ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಈತ ಮನೆ ರೀಪೇರಿಗಾಗಿ ಮಾಡಿಕೊಂಡಿದ್ದ ಸಾಲದಿಂದ ತೀರಿಸಲಾಗದೆ ಹೆಚ್ಚಾಗಿ ಮದ್ಯ ಸೇವನೆ ಮಾಡುತ್ತಿದ್ದ. ಆದರೆ, ನಾನು ಮನೆಯಲ್ಲಿ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ದರಿಂದ ಆತನ ಸಾವಿನ ಕುರಿತು ತನಿಖೆ ನಡೆಸುವಂತೆ ಮೃತನ ಸಂಬಂಧಿ ಸುಭದ್ರಮ್ಮ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net