ಸರ್ವರ್ ಸಮಸ್ಯೆಗೆ ಸಿಗದ ಪರಿಹಾರ

ration
ನವಲಗುಂದ ಪಟ್ಟಣದ ಸಹಕಾರಿ ಪತ್ತಿನ ಸಂಘದ ಆವರಣದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಸರತಿ ಸಾಲಿನಲ್ಲಿ ನಿಂತಿರುವ ಫಲಾನುಭವಿಗಳು.
Published on

ನವಲಗುಂದ: ಪಡಿತರ ಆಹಾರ ಧಾನ್ಯ ವಿತರಣೆಯಲ್ಲಿ ಸರ್ವರ್ ಡೌನ್‌ನಿಂದ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಆಹಾರ ಇಲಾಖೆ ಹೊಸದಾಗಿ ಅಳವಡಿಸಿರುವ ತಂತ್ರಾಂಶದಿಂದ ಪಡಿತರದಾರರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು ನ್ಯಾಯಬೆಲೆ ಅಂಗಡಿಗಳ ಮುಂದೆ ದಿನವಿಡೀ ಪಡಿತರ ಧಾನ್ಯಕ್ಕಾಗಿ ಕಾಯುವಂತಾಗಿದೆ.

ರೇಷನ್ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬರುವ ಜನರು ಬೆಳಗ್ಗೆಯಿಂದ ಸಂಜೆಯವರೆಗೆ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಇತ್ತು. ಸಮಸ್ಯೆ ಪರಿಹರಿಸುವ ಉದ್ದೇಶದಿಂದ ತಂತ್ರಾಂಶದಲ್ಲಿ ಬದಲಾವಣೆ ಮಾಡಲಾಗಿದೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ.

ಪಡಿತರಕ್ಕಾಗಿ ಶುಕ್ರವಾರ ನ್ಯಾಯಬೆಲೆ ಅಂಗಡಿಗೆ ಬಂದ ಗ್ರಾಹಕರು ದಿನವಿಡೀ ಕಾದರೂ ಆಹಾರ ಧಾನ್ಯ ಸಿಕ್ಕಿಲ್ಲ. ಪಡಿತರಕ್ಕಾಗಿ ಕೆಲಸ ಕಾರ್ಯ ಬಿಟ್ಟು ಅಲೆದಾಡುವುದು ತಪ್ಪುತ್ತಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net