ಅನಧಿಕೃತ ಪೆಟ್ಟಿಗೆ ಅಂಗಡಿ ತೆರವು

17-GPT-1
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಪೆಟ್ಟಿಗೆ ಅಂಗಡಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ತೆರವುಗೊಳಿಸಲಾಯಿತು.
Published on

ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಪೆಟ್ಟಿಗೆ ಅಂಗಡಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬುಧವಾರ ತೆರವುಗೊಳಿಸಲಾಯಿತು.

ಗ್ರಾಮದ ಕುನ್ನನಾಯಕ ಎಂಬಾತ 40 ವರ್ಷಗಳಿಂದ ಸಂಪತ್ತು ಅವರ ಮನೆಗೆ ಹೊಂದಿಕೊಂಡಂತೆ ಪೆಟ್ಟಿಗೆ ಅಂಗಡಿ ಹಾಕಿಕೊಂಡಿದ್ದರು. ಇದರಿಂದ ತಮ್ಮ ಮನೆಯ ನವೀಕರಣಕ್ಕೆ ತೊಂದರೆಯಾಗಿದ್ದು ಅಂಗಡಿಯನ್ನು ತೆರವುಗೊಳಿಸುವಂತೆ ಸಂಪತ್ತು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಲೋಕಾಯುಕ್ತ ಮೊರೆ ಹೋಗಿದ್ದರು. ಇದನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾದಾಗಲೆಲ್ಲ ಗ್ರಾಮದ ಕೆಲವರು ಅಡ್ಡಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಸಂಪತ್ತು ಹೈಕೋರ್ಟ್ ಮೊರೆಹೋಗಿ ತೆರವಿಗೆ ಆದೇಶ ತಂದಿದ್ದರು.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಬುಧವಾರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್‌ನಲ್ಲಿ ಅಂಗಡಿಯನ್ನು ತೆರವುಗೊಳಿಸಿದರು. ತಾಲೂಕು ಪಂಚಾಯಿತಿ ಇಒ ರಾಮಲಿಂಗಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ, ಸರ್ಕಲ್ ಇನ್ಸ್‌ಸೆಕ್ಟ್ಟರ್ ವನರಾಜು, ಸಬ್ ಇನ್ಸ್‌ಸೆಕ್ಟ್ಟರ್ ಈಶ್ವರ್ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net