ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ; ಹೈಕೋರ್ಟ್ ಸೂಚನೆಯಿಂದ ಪ್ರಭಾವಿಗಳಿಗೆ ಶುರುವಾಯ್ತು ನಡುಕ...

Dharwad HighCourt
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಇಂದು ನಡೆದ ವಿಚಾರಣೆಯಲ್ಲಿ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹಾಜರಾಗಿದ್ದರು. ಈ ವೇಳೆ ಪ್ರಭಾವಿಗಳ ಮೇಲೆ ಮೊದಲು ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್​ ಸೂಚನೆ ನೀಡಿತು.

1,31,745 ಅನಧಿಕೃತ ಕಟ್ಟಡಗಳ ಸರ್ವೆ ನಡೆಸಲಾಗಿದೆ. ಈ ಪೈಕಿ 16,286 ಕಟ್ಟಡಗಳಿಗೆ ದಾಖಲೆ ನೀಡುವಂತೆ ನೋಟಿಸ್ ನೀಡಲಾಗಿದೆ. 2020 ರಿಂದೀಚೆಗೆ 8496 ಕಟ್ಟಡಗಳಿಗೆ ನಕ್ಷೆ‌ ನೀಡಲಾಗಿದೆ. ಇವುಗಳಲ್ಲಿ 7245 ಕಟ್ಟಡಗಳ ಸರ್ವೆ ನಡೆಸಲಾಗಿದೆ. 5341 ಕಟ್ಟಡಗಳು ನಕ್ಷೆ ಉಲ್ಲಂಘಿಸಿರುವುದು ಪತ್ತೆಯಾಗಿದೆ. 2656 ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ವರದಿ ಸಲ್ಲಿಸಲು 3 ತಿಂಗಳ ಕಾಲಾವಕಾಶಕ್ಕೆ ಮನವಿ ಸಲ್ಲಿಸಲಾಗಿದೆ.

ಹೈಕೋರ್ಟ್ ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಈ ವಿಚಾರವಾಗಿ ಪ್ರಮಾಣಪತ್ರ ಸಲ್ಲಿಸಿದ್ದು, ಕಾಗದದ ಮೇಲೆ ಕ್ರಮಕ್ಕಿಂತ ವಾಸ್ತವದಲ್ಲಿ ಕ್ರಮ ಕೈಗೊಳ್ಳಿ. ಪ್ರಭಾವಿಗಳ ಮೇಲೆ‌ ಮೊದಲು ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net