ಅನಧಿಕೃತ ತಂಬಾಕು ಮಾರಾಟ: ಅಂಗಡಿಕಾರರಿಗೆ ದಂಡ

tobaco ride
Published on

ಯಲ್ಲಾಪುರ: ಪಟ್ಟಣದಲ್ಲಿ ಅನಧಿಕೃತವಾಗಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದ ಅಂಗಡಿಗಳ‌ ಮೇಲೆ ಮಂಗಳವಾರ ತಂಬಾಕು ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, ದಂಡ ವಿಧಿಸಿದರು. 

ಪಟ್ಟಣದ ವಿವಿಧೆಡೆ 20 ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು, ಒಟ್ಟು 2800 ರೂ ದಂಡ ವಿಧಿಸಿದರು. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು. ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸಬಾರದು. ಮಾರಾಟ ಮಾಡಲು ಲೈಸನ್ಸ್ ಪಡೆದಿರಬೇಕು ಎಂದು ಎಚ್ಚರಿಸಲಾಯಿತು. 

ತಹಸೀಲ್ದಾರ ತನುಜಾ ಸವದತ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ಟ, ಪ.ಪಂ ಆರೋಗ್ಯ ನಿರೀಕ್ಷಕ ಗುರು ಗಡಗಿ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net