ರಾತ್ರೋ ರಾತ್ರಿ ಅನಧಿಕೃತ ಶೆಡ್ ನಿರ್ಮಾಣ

14SPT5
ಸೋಮವಾರಪೇಟೆ ಪಟ್ಟಣದ ಹೊಸ ಬಡಾವಣೆಯಲ್ಲಿ ಪಂಚಾಯಿತಿ ಜಾಗದಲ್ಲಿ ಅನಧಿಕೃತ ಶೆಡ್ ನಿರ್ಮಾಣಗೊಂಡಿರುವುದು.
Published on

ಸೋಮವಾರಪೇಟೆ: ಪಟ್ಟಣದ ಹೊಸ ಬಡಾವಣೆಯಲ್ಲಿ ರಾತ್ರೋ ರಾತ್ರಿ ಅನಧಿಕೃತ ಶೆಡ್ ನಿರ್ಮಾಣಗೊಂಡಿದ್ದು, ಇದಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ಯಾವುದೇ ಅನುಮತಿ ಪಡೆದಿರುವುದಿಲ್ಲ ಎಂದು ತಿಳಿದು ಬಂದಿದೆ.

ಸೋಮವಾರ ಸ್ಥಳಕ್ಕೆ ಪಂಚಾಯಿತಿ ಮುಖ್ಯಾಧಿಕಾರಿ ಸತೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸರಿಗೆ ದೂರು ನೀಡಿದ್ದು, ಮಂಗಳವಾರ ಪೊಲೀಸ್‌ರೊಂದಿಗೆ ಸ್ಥಳಕ್ಕೆ ತೆರಳಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕೆಗೆ ತಿಳಿಸಿದ್ದಾರೆ. ಮಹದೇಶ್ವರ ಬಡಾವಣೆಯ ಕೆಲವು ನಿವಾಸಿಗಳು ಏಕಾಏಕಿ ಸಿದ್ದಿವಿನಾಯಕ ಸೇವಾ ಸಮಿತಿ ಬ್ಯಾನರ್ ಅಳವಡಿಸಿ ಶೆಡ್ ನಿರ್ಮಾಣ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net