

ಲಕ್ಷ್ಮೇಶ್ವರ: ಪಟ್ಟಣದ ಪಂಪವೃತ್ತದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-ನಂ-4ರ ಕಾಂಪೌಂಡ್‌ಗೆ ಹೊಂದಿಕೊಂಡು ಅನಧಿಕೃತವಾಗಿ ನಿರ್ಮಿಸಿದ್ದ ಗೂಡಂಗಡಿಗಳನ್ನು ಪುರಸಭೆಯವರು ಬುಧವಾರ ತೆರವುಗೊಳಿಸಿದರು.
ಸದಾ ಸಂಚಾರ ದಟ್ಟಣೆಯಿಂದ ಕೂಡಿದ್ದು ಶಾಲಾ ಮಕ್ಕಳು ಓಡಾಡುವ ಪ್ರದೇಶವಾಗಿದೆ. ರಸ್ತೆ ತಿರುವಿನಲ್ಲಿ ಶಾಲೆಯ ಕಾಂಪೌಂಡ್‌ಗೆ ಹೊಂದಿಕೊಂಡು ಹತ್ತಾರು ಗೂಡಂಗಡಿಗಳನ್ನು ನಿರ್ಮಿಸಲಾಗಿತ್ತು. ಇದು ಜನ-ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಅಲ್ಲದೆ, ಮಕ್ಕಳ ಆರೋಗ್ಯ ಮತ್ತು ಕಲಿಕೆಗೆ ಕಿರಿಕಿರಿ ಉಂಟು ಮಾಡುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ಪುರಸಭೆಗೆ ದೂರು ಸಲ್ಲಿಸಿದ್ದರು.
ಬುಧವಾರ ಬೆಳಗ್ಗೆ ಕಾರ್ಯಾಚರಣೆಗಿಳಿದ ಪುರಸಭೆ ಸಿಬ್ಬಂದಿ ಗೂಡಂಗಡಿಗಳನ್ನು ತೆರವುಗೊಳಿಸಿದರು. ಪುರಸಭೆ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಪೌರ ಕಾರ್ಮಿಕರು ಇದ್ದರು.