ಮೊಮ್ಮಗಳ ವಯಸ್ಸಿನವಳೊಂದಿಗೆ ಅಂಕಲ್ ಪರಾರಿ?

crime
Published on

ಹುಬ್ಬಳ್ಳಿ: ಮೊಮ್ಮಗಳ ವಯಸ್ಸಿನ ಯುವತಿಯೊಂದಿಗೆ ಅಂಕಲ್ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಇಲ್ಲಿಯ ಕೇಶ್ವಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಎರಡು ಮಕ್ಕಳ ತಂದೆ ಪ್ರಕಾಶ ಗೋಪಿ (50)ಎಂಬಾತ 18 ವರ್ಷದ ಯುವತಿ ಜತೆಗೆ ಪ್ರೀತಿಯಲ್ಲಿ ಬಿದ್ದಿದ್ದಾನೆ. ಕೊಲ್ಹಾಪುರದ ಅಜ್ಜಿ ಮನೆಯಲ್ಲಿದ್ದ ಯುವತಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ಯುವತಿ ಪಾಲಕರು ದೂರಿನಲ್ಲಿ ವಿವರಿಸಿದ್ದಾರೆ. ಅಲ್ಲದೇ ನಾಪತ್ತೆಯಾಗಿರುವ ನನ್ನ ಮಗಳನ್ನು ಹುಡುಕಿಕೊಡಿ ಎಂದು ಪಾಲಕರು ಬೀದಿ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ.

ಎರಡು-ಮೂರು ವರ್ಷದ ಹಿಂದೆಯೇ ಕರೆದುಕೊಂಡು ಹೋಗಿದ್ದ ಪ್ರಕಾಶನ ಮೇಲೆ ಫೋಕ್ಸೋ ಪ್ರಕರಣವಿದೆ. ಯುವತಿ ವಯಸ್ಸಿಗೆ ಬರುತ್ತಿದ್ದಂತೆಯೇ ಅಜ್ಜಿ ಮನೆಯಿಂದ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೇಶ್ವಾಪುರ ಠಾಣೆ ಪೊಲೀಸರು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net