

ಎಚ್.ಡಿ.ಕೋಟೆ : ಡಾ.ಬಿ.ಆರ್.ಅಂಬೇಡ್ಕರ್ ಭವನ ಉದ್ದೇಶಿತ ಜಾಗದಲ್ಲಿ ಭವನ ನಿರ್ಮಾಣ ಆಗಿಲ್ಲ ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಗ್ರಾಮಸ್ಥರು ಬುಧವಾರ ಶಾಸಕ ಅನಿಲ್ ಚಿಕ್ಕಮಾದು ದೂರು ನೀಡಿದರು. ತಾಲೂಕು ಆಡಳಿತ ಸೌಧಕ್ಕೆ ಶಾಸಕರು ಬರುವುದನ್ನೆ ಎದುರು ನೋಡುತ್ತಿದ್ದ ನೂರಕ್ಕೂ ಹೆಚ್ಚು ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಚಿಕ್ಕಕೆರೆಯೂರು ಗ್ರಾಮದಲ್ಲಿ ಉದ್ದೇಶಿತ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಆಗದೆ, ಬೇರೊಂದು ಜಾಗದಲ್ಲಿ ಕಟ್ಟಡ ನಿರ್ಮಾಣ ಆಗಿದೆ. ಈ ಲೋಪಕ್ಕೆ ಅಧಿಕಾರಿಗಳೇ ಕಾರಣ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೂರಾರು ಗ್ರಾಮಸ್ಥರು ಮನವಿ ಸಲ್ಲಿಸಿದರು. ನಂತರ ಶಾಸಕರು, ತಹಸೀಲ್ದಾರ್ ಶ್ರೀನಿವಾಸ್ ಅವರಿಗೆ, ಈ ವಿಚಾರವಾಗಿ ಸಂಪೂರ್ಣ ವರದಿ ಮಾಡಿ ಯಾವ ಅಧಿಕಾರಿ ತಪ್ಪು ಮಾಡಿದ್ದಾರೆ ಅಂತಹ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಸೂಚಿಸಿದರು.