ಪ್ರಾಧಿಕಾರದ ನೌಕರರ ಸಂಘಕ್ಕೆ ಅವಿರೋಧ ಆಯ್ಕೆ

ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘಕ್ಕೆ ಪದಾಧಿಕಾರಿಗಳನ್ನು ಮಲೆಮಹದೇಶ್ವರ ಬೆಟ್ಟದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘಕ್ಕೆ ಪದಾಧಿಕಾರಿಗಳನ್ನು ಮಲೆಮಹದೇಶ್ವರ ಬೆಟ್ಟದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
Published on

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘಕ್ಕೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಂಘದ ಕಾನೂನು ಸಲಹೆಗಾರ ಚಿಕ್ಕಮನೂರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಕೆ.ಮಹದೇವಸ್ವಾಮಿ, ಅಧ್ಯಕ್ಷರಾಗಿ ಬಿ.ಮಹದೇವಪ್ರಸಾದ್, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಮಹದೇವಸ್ವಾಮಿ, ಕೃಷ್ಣಮೂರ್ತಿ, ಸೌಮ್ಯ ಪ್ರಕಾಶ್, ಚಿನ್ನಸ್ವಾಮಿ, ಮಂಜುನಾಥ್ ಹಾಗೂ 10 ನಿರ್ದೇಕರನ್ನು ಆಯ್ಕೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net