Bengaluru| ನಿರಂತರ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಓರ್ವ ಸಾವು, ಐವರು ನಾಪತ್ತೆ

Building Collapse
Published on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ನಗರದ ಹಲವು ಪ್ರದೇಶಗಳು ಜಲಾವೃತ್ತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಸರ್ಕಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಇದೀಗ ಣ್ಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬಾಬುಸಾಬ್​ಪಾಳ್ಯದಲ್ಲಿ ನಿರ್ಮಾಣ ಹಂತದ (Under Construction) ಕಟ್ಟಡವೊಂದು ಕುಸಿದಿದೆ.

ನಿರಂತರ ಮಳೆಯ (Heavy Rains) ಕಾರಣ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಅವಶೇಷಗಳಡಿ 20 ಮಂದಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪೈಕಿ 14 ಮಂದಿಯನ್ನು ರಕ್ಷಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾನೆ. ಐವರು ಕಾಣೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು ಆರು ಅಂತಸ್ತಿನ ಕಟ್ಟಡ ಇದಾಗಿದ್ದು, ಬಹುತೇಕ ಕೆಲಸ ಪೂರ್ಣಗೊಂಡಿತ್ತು. ದುರ್ಘಟನೆ ಸಂಭವಿಸಿದಾಗ 20 ಕಾರ್ಮಿಕರು ಕಟ್ಟಡದಲ್ಲಿದ್ದರು ಎಂದು ವರದಿಯಾಗಿದೆ. ಮಳೆಯ ನಡುವೆಯೂ ಕಟ್ಟಡದ ಪೇಂಟಿಂಗ್​ ಕೆಲಸಗಳು ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net