ಮೂರ್‌ಕೈ ಅಂಡರ್ ಪಾಸ್ ಸಮಸ್ಯೆ

dc
Published on

ಉಡುಪಿ: ಮೂರ್‌ಕೈ ಅಂಡರ್ ಪಾಸ್ ಬಳಿ ನೀರು ನಿಲ್ಲುವ ಕುರಿತು ಉಪವಿಭಾಗಾಧಿಕಾರಿಗಳೊಂದಿಗೆ ಜಂಟಿ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಪಟ್ಟ ಬಾಕಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕುಂದಾಪುರದ ಪ್ಲೈ ಓವರ್, ಮೂರ್‌ಕೈ ಬಳಿಯ ಅಂಡರ್‌ಪಾಸ್ ಹಾಗೂ ಪಡುಬಿದ್ರಿಯ ಸೇತುವೆ ಕಾಮಗಾರಿ ವಿಳಂಬ ಕುರಿತಂತೆ ಸಾರ್ವಜನಿಕರಿಂದ ಪದೇ ಪದೇ ದೂರುಗಳು ಸಲ್ಲಿಕೆಯಾಗುತ್ತಿದೆ. ಪ್ರಸ್ತುತ ಮಳೆ ಕಡಿಮೆಯಾಗಿದೆ. ಕೋವಿಡ್‌ನಿಂದ ಊರುಗಳಿಗೆ ತೆರಳಿದ್ದ ಕಾರ್ಮಿಕರೂ ವಾಪಾಸು ಆಗಮಿಸುತ್ತಿದ್ದಾರೆ. ಹೀಗಾಗಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸುವಂತೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈಗಾಗಲೇ ಗುರುತಿಸಲಾಗಿರುವ 32ಬ್ಲಾಕ್ ಸ್ಪಾಟ್‌ಗಳಲ್ಲಿ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯ ಹಲವು ಕಡೆಗಳಲ್ಲಿ ಬೀದಿ ದೀಪ ಇಲ್ಲ. ಈ ಬಗ್ಗೆ ಪರಿಶೀಲಿಸಿ, ರಸ್ತೆಗುಂಡಿಗಳನ್ನು ಮುಚ್ಚುವಂತೆ ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪ ವಿಭಾಗಾಧಿಕಾರಿ ರಾಜು ಉಪಸ್ಥಿತರಿದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net