

ಹುಬ್ಬಳ್ಳಿ: ನಗರದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಸಂಭ್ರಮದಿಂದ ಮಂಗಳವಾರ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.
ಮುಖ್ಯೋಪಾಧ್ಯಾಯಿನಿ ರಜನಿ ಪಾಟೀಲ ಮಾತನಾಡಿ, ನಮಗೆ ಹೋರಾಟದ ಫಲವಾಗಿ ಸ್ವಾತಂತ್ರ್ಯ ಸಿಕ್ಕಿದೆ. ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ನಾವು ಅರ್ಥ ಮಾಡಿಕೊಂಡು ಹೆಜ್ಜೆ ಹಾಕಬೇಕು ಎಂದು ಸಲಹೆ ನೀಡಿದರು.
ಬಿಳಿ ಸಮವಸ್ತ್ರ ಧರಿಸಿ ಆಗಮಿಸಿದ್ದರು. ಮಕ್ಕಳಿಂದ ಆಕರ್ಷಕ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಋತು ಆನೆಗೊಂದು, ತೇಜಸ್ ಅನಿಶೆಟ್ಟರ್ ನಿರೂಪಿಸಿದರು. ವೈಭವಿ ಪಾಟೀಲ ವಂದಿಸಿದರು.