ಕಾಂಗ್ರೆಸ್​ನಲ್ಲೇ ಇದ್ದೇನೆ : ಉಂಡಿ ಸ್ಪಷ್ಟನೆ

Undi New
Published on

ಹುಬ್ಬಳ್ಳಿ : ನಾನು ಕಾಂಗ್ರೆಸ್​ನಲ್ಲಿಯೇ ಇದ್ದೇನೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿಗೆ ಹೋಗಿರುವುದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ವೀರೇಶ ಉಂಡಿ ಸ್ಪಷ್ಟಪಡಿಸಿದ್ದಾರೆ.

ನಾನು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂಬ ಊಹಾಪೋಹ ಸುಳ್ಳು. ಅಂತಹ ಯಾವುದೇ ಬೆಳವಣಿಗೆ ಆಗಿಲ್ಲ. ಅಂತಹ ಪ್ರಸಂಗ ಬಂದರೆ ಪ್ರಮುಖರೊಂದಿಗೆ ರ್ಚಚಿಸಿ, ಸಾರ್ವಜನಿಕವಾಗಿ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ನಾನೊಬ್ಬ ಕಾಂಗ್ರೆಸ್​ನ ಪ್ರಾಮಾಣಿಕ ಕಾರ್ಯಕರ್ತ. ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net