ವಿದ್ಯಾರ್ಥಿಗಳಲ್ಲಿ ಭಾಷಾ ಪ್ರೌಢಿಮೆ ಬೆಳಸಿರಿ

Untitled design (2)
ಹೂವಿನಹಡಗಲಿಯ ತುಂಗಭದ್ರಾ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಗಣಿತ ವಿಷಯ ಶಿಕ್ಷಕರ ಕಾರ್ಯಾಗಾರವನ್ನು ಬಿಇಒ ಮಹೇಶ್.ವಿ.ಪೂಜಾರ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಪ್ರಕಾಶ್ ಇತರರಿದ್ದರು.
Published on

ಹೂವಿನಹಡಗಲಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಗಾಗಿ ಆಧುನಿಕ ತಂತ್ರಜ್ಞಾನ ಬಳಸಿ ಶಿಕ್ಷಕರು ಬೋಧನೆ ಮಾಡಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್.ವಿ.ಪೂಜಾರ ಹೇಳಿದರು.

ವಿದ್ಯಾರ್ಥಿಗಳಿಗೆ ಸರಳವಾಗಿ ಬೋಧಿಸಿ

ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಶಾಲಾ ಸಾಕ್ಷರತಾ ಶಿಕ್ಷಣ ಇಲಾಖೆ, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ತುಂಗಭದ್ರಾ ವಿದ್ಯಾಸಂಸ್ಥೆ ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಮತ್ತು ಗಣಿತ ವಿಷಯ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳು ಕಠಿಣ ಎನಿಸಿಕೊಂಡಿವೆ. ಹೀಗಾಗಿ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಸರಳವಾಗಿ ಬೋಧಿಸಬೇಕು. ಈ ಭಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ವಿಶೇಷ ಮಾದರಿಯಲ್ಲಿ ನಡೆಯಲಿವೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ತಯಾರಿಯ ಬಗ್ಗೆ ನಿರಂತರವಾಗಿ ತಿಳಿಸಬೇಕು. ಕನ್ನಡ ಗದ್ಯ, ಪದ್ಯ, ವ್ಯಾಕರಣ ಮತ್ತು ಪ್ರಬಂಧ, ಪತ್ರ ಲೇಖನ ಮೊದಲಾದ ಅಂಶಗಳನ್ನು ವರ್ಣಿಸಿ ಭಾಷೆ ಪ್ರೌಢಿಮೆ ಬೆಳಸಿರಿ ಎಂದರು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಮನೋಹರ್ ಹಳೆಗನ್ನಡ ಸಾಹಿತ್ಯ ಕುರಿತು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ರವೀಶ್ ಮೈಸೂರು, ಬಿ.ಎನ್.ಲಕ್ಷ್ಮಣ ಶಿಕ್ಷಕರಿಗೆ ತರಬೇತಿ ನೀಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ತಾಲೂಕು ಪ್ರೌಢಶಾಲಾ ಮುಖ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಪ್ರಕಾಶ್ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ, ರಾಜ್ಯ ಸಹ ಕಾರ್ಯದರ್ಶಿ ಶಿವಕುಮಾರ್ ಗಡ್ಡಿ, ಖಜಾಂಚಿ ಬಸಪ್ಪ ಕೆ, ಶೇಕ್ ಅಹ್ಮದ್, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್.ಮಲ್ಲಿಕಾರ್ಜುನ. ಶಿಕ್ಷಕರಾದ ಸುರೇಶ ಅಂಗಡಿ, ದ್ವಾರಕೀಶ್ ರೆಡ್ಡಿ, ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ವಸತಿ ಶಾಲೆಯ ಕನ್ನಡ, ಗಣಿತ ವಿಷಯ ಶಿಕ್ಷಕರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net