ಮುಳ್ಳೂರು ಸರ್ಕಾರಿ ಶಾಲೆಯಲ್ಲಿ ಸಮವಸ್ತ್ರ ವಿತರಣೆ

06SPT10
ಸೋಮವಾರಪೇಟೆ ತಾಲೂಕಿನ ಮುಳ್ಳೂರು ಮತ್ತು ನಿಡ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಘದಿಂದ 67 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು. ಜಯಕುಮಾರ್, ಅಶೋಕ್, ಸುನಿಲ್, ಸತೀಶ್ ಇದ್ದರು.
Published on

ಸೋಮವಾರಪೇಟೆ: ತಾಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಮಕ್ಕಳಿಗೆ ಸಮವಸ್ತ್ರವನ್ನು ಶನಿವಾರ ವಿತರಿಸಲಾಯಿತು.

1988-89ನೇ ಶೈಕ್ಷಣಿಕ ಸಾಲಿನಲ್ಲಿ ನಿಡ್ತ ಹಾಗೂ ಮುಳ್ಳೂರು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಗಳಿಗೆ ನೆರವು ನೀಡುತ್ತಿದ್ದೇವೆ. ತಾವು ಓದಿದ ಸರ್ಕಾರಿ ಶಾಲೆಗಳಿಗೆ ಏನಾದರೊಂದು ಸಹಾಯ ಮಾಡುವ ಮೂಲಕ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು ಎಂಬ ಮೂಲ ಉದ್ದೇಶದೊಂದಿಗೆ ಸಂಘವನ್ನು ಪ್ರಾರಂಭಿಸಿದ್ದೇವೆ ಎಂದು ಸಂಘದ ಅಧ್ಯಕ್ಷ ಜಯಕುಮಾರ್ ತಿಳಿಸಿದರು.

ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಲೋಟಗಳನ್ನು ವಿತರಿಸುವುದಾಗಿ ತಿಳಿಸಿದರು. ಸಂಘದ ಕಾರ್ಯದರ್ಶಿ ಸುನಿಲ್ ಅವರು, ಮುಳ್ಳೂರು ಶಾಲಾ ಆವರಣಕ್ಕೆ ಇಂಟರ್ ಲಾಕ್ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು. ನಿಡ್ತ ಸರ್ಕಾರಿ ಶಾಲೆಯ ಮೂವತೈದು ಹಾಗೂ ಮುಳ್ಳೂರು ಕಿರಿಯ ಪ್ರಾಥಮಿಕ ಶಾಲೆಯ ಮೂವತ್ತೆರಡು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಸಂಘದ ಸದಸ್ಯರಾದ ಮುರುಗನ್, ರಾಮಕೃಷ್ಣ, ಅಶೋಕ್, ಮಲ್ಲೇಶ್, ರೇಖಾ, ಹೇಮಲತಾ, ಮಣಿ, ಮೋಹನಾಕ್ಷಿ, ಗಣೇಶ್, ಯೋಗೇಶ್, ಮಹೇಶ್, ಮುಖ್ಯ ಶಿಕ್ಷಕ ಸತೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net