

ಶಿರ್ವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ನವೋದಯ ಚಾರಿಟೆಬಲ್ ಟ್ರಸ್ಟ್ನ ರಜತಮಹೋತ್ಸವ ಹಾಗೂ ಸದಸ್ಯರ ಬೃಹತ್ ಸಮಾವೇಶ ಮೇ 10ರಂದು ಮಂಗಳೂರಿನಲ್ಲಿ ನಡೆಯಲಿದೆ. ಆ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ವ್ಯಾಪ್ತಿಯ ಸದಸ್ಯರಿಗೆ ಸಮವಸ್ತ್ರ ಉಚಿತ ವಿತರಣೆ ಕಾರ್ಯಕ್ರಮ ಸಂಘದ ಪ್ರಧಾನ ಕಾರ್ಯಾಲಯದಲ್ಲಿ ಗುರುವಾರ ನಡೆಯಿತು. ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವೀರೇಂದ್ರ ಪಾಟ್ಕರ್ ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಸ್ವಾಗತಿಸಿ, ನಿರೂಪಿಸಿದರು. ಸಂಘದ ಸ್ಥಳೀಯ ಪ್ರೇರಕಿ ಗೀತಾ ವಂದಿಸಿದರು.