ಕಲಿಕಾ ವಾತಾವರಣ ನಿರ್ಮಿಸಬೇಕು

IMG-20240828-WA0085
Published on

ನಂಜನಗೂಡು : ಸರ್ಕಾರಿ ಶಾಲೆಗಳಲ್ಲೂ ಸಹ ಖಾಸಗಿ ಶಾಲೆಗಳಂತೆ ಕಲಿಕಾ ವಾತಾವರಣ ನಿರ್ಮಿಸಬೇಕು ಎಂಬ ಮನೋಭಾವನೆಯಿಂದ ಅಶೋಕಪುರಂ ಬಡಾವಣೆಯ ಯುವಕ ಮಿತ್ರರು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ಅವರು ನಗರದ ಅಶೋಕಪುರಂ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕಪುರಂ ಯುವಕರ ಸಂಘದವರು ಮಾಜಿ ಸಂಸದ ಆರ್.ಧ್ರುವನಾರಾಯಣ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿ, ಮಾತನಾಡಿದರು.
ನನ್ನ ತಂದೆ ಆರ್. ಧ್ರುವನಾರಾಯಣ ಈ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಕೆಲಸ ಮಾಡುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಕಾರಣರಾಗಿದ್ದರು. ನಾನು ಸಹ ಅವರ ಹಾದಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದೇನೆ. ನಗರದ ಅಶೋಕಪುರಂ ಬಡಾವಣೆಯ ಶಾಲೆಯನ್ನು ಅಭಿವೃದ್ಧಿಪಡಿಸುವ ಮೂಲಕ ಮಾದರಿ ಶಾಲೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಎಂದ ಅವರು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೂ ಖಾಸಗಿ ಶಿಕ್ಷಣ ಸಂಸ್ಥೆಗಳಂತೆ ಸೌಕರ್ಯಗಳು ದೊರಕಬೇಕು, ಆ ಮೂಲಕ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂಬ ಹಿತದೃಷ್ಟಿಯಿಂದ ಯುವಕ ಮಿತ್ರರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net