ಕೇಂದ್ರ ವಿತ್ತಸಚಿವೆಗೆ ಸ್ವಾಗತ

nirmala
ಮಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಜಿಲ್ಲಾ ಬಿಜೆಪಿಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಿಎ ಶಾಂತಾರಾಮ ಶೆಟ್ಟಿ, ಸಹ ಸಂಚಾಲಕ ಸಿಎ ಎಸ್.ಎಸ್.ನಾಯಕ್, ವಿಭಾಗ ಪ್ರಭಾರಿ ಉದಯ್ಕುಮಾರ್ ಶೆಟ್ಟಿ ಮತ್ತಿತರರು ಸ್ವಾಗತಿಸಿದರು.
Published on

ಮಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಪ್ರವಾಸದ ಸಲುವಾಗಿ ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ದ.ಕ.ಜಿಲ್ಲಾ ಬಿಜೆಪಿ ಪರವಾಗಿ ಅವರಿಗೆ ಸ್ವಾಗತ ಕೋರಲಾಯಿತು.
ಜಿಲ್ಲಾ ಬಿಜೆಪಿಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಿಎ ಶಾಂತಾರಾಮ ಶೆಟ್ಟಿ, ಸಹ ಸಂಚಾಲಕ ಸಿಎ ಎಸ್.ಎಸ್.ನಾಯಕ್, ವಿಭಾಗ ಪ್ರಭಾರಿ ಉದಯ್ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಯುವ ಮೋರ್ಚಾ ಉಪಾಧ್ಯಕ್ಷ ಅಮಿತ್‌ರಾಜ್, ವಿನ್ಯಾಸ್ ಶೆಟ್ಟಿ, ಅಕ್ಷಯ್ ಆಳ್ವ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಜಿಲ್ಲಾಡಳಿತ ಪರವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net