ಚುನಾವಣೆಯಲ್ಲಿ ಸೋತಿದ್ದೇವೆ, ಇವಿಎಂ ಹ್ಯಾಕ್ ಎನ್ನುವುದಿಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

23 Dwd 2 Pralhad Joshi
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಸಹಜವಾಗಿ ಆಡಳಿತ ಪಕ್ಷದ ಅಭ್ಯರ್ಥಿಗಳು ಉಪ ಚುನಾವಣೆಯಲ್ಲಿ ಗೆಲ್ಲುತ್ತಾರೆ. ಸೋತಿದ್ದೇವೆ ಎಂದು ಕಾಂಗ್ರೆಸ್‌ನವರ0ತೆ ಇವಿಎಂ ಹ್ಯಾಕ್ ಆಗಿದೆ ಎನ್ನುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ನಾವು ಗೆಲ್ಲುತ್ತೇವೆ ಎಂಬ ಭರವಸೆ ಇತ್ತು. ಆದರೆ, ಅಲ್ಲಿ ಏನು ತಪ್ಪಾಗಿದೆ ಎಂಬುದರ ಬಗ್ಗೆ ಪರಾಮರ್ಶೆ ಮಾಡಲಾಗುವುದು. ಶಿಗ್ಗಾಂವಿಯಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಕಾಂಗ್ರೆಸ್‌ನಿ0ದ ಹಣ ಹಂಚಿಕೆಯಾಗಿದೆ. ಕಾಂಗ್ರೆಸ್ 2- 3 ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಸಚಿವರನ್ನು ನೇಮಕ ಮಾಡಿತ್ತು ಎಂದರು.

ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದೆ:

ಮಹಾರಾಷ್ಟçದಲ್ಲಿ ಪ್ರತಿಪಕ್ಷ ಆಗಲೂ ಕಾಂಗ್ರೆಸ್‌ಗೆ ಅವಕಾಶ ಇಲ್ಲದಂತಾಗಿದೆ. ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ನವರು ಜೆಎಂಎ0 ಜತೆ ಹೋಗಿದ್ದರು. ಕಾಂಗ್ರೆಸ್ ಯಾರ ಜತೆಗೂಡುತ್ತದೋ ಅವರನ್ನು ಮುಳುಗಿಸುತ್ತದೆ. ಸಮಾಜವಾದಿ ಪಾರ್ಟಿ, ಶರದ್ ಪವಾರ್ ಹಾಗೂ ಉದ್ಧವ್ ಠಾಕ್ರೆಯನ್ನು ಮುಳುಗಿಸಿದ್ದಾರೆ. ರಾಹುಲ್ ಗಾಂಧಿ ಲಾಂಚಿ0ಗ್ ಮತ್ತೊಮ್ಮೆ ವಿಫಲವಾಗಿದೆ. ಹೊಸ ಇಂಜಿನ್ ಹಾಕಿ ಲಾಂಚ್ ಆಗಿದ್ದ ಅವರ ವಿಮಾನ ಕೆಳಗೆ ಬೀದ್ದಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net