ಕೇಂದ್ರ ಸಚಿವ ವಿ.ಸೋಮಣ್ಣ ಹುಟ್ಟುಹಬ್ಬ; ಉಚಿತ ಆರೋಗ್ಯ, ರಕ್ತದಾನ ಶಿಬಿರ

somanna
Published on

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣರವರ ಹುಟ್ಟುಹಬ್ಬದ ಅಂಗವಾಗಿ ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಮತ್ತು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು,ಹಂಪಲು ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ನೂರಾರು ಜನರಿಗೆ ತಜ್ಞ ವೈದ್ಯರಿಂದ ತಪಾಸಣೆ ಮಾಡಲಾಯಿತು.

ಇದಕ್ಕೂ ಮುನ್ನ ವಿ.ಸೋಮಣ್ಣ ಆದಿಚುಂಚಗಿರಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಶ್ರೀಸೌಮ್ಯನಾಥ ಸ್ವಾಮೀಜಿ ಆಶೀರ್ವಾದ ಪಡೆದರು. ಈ ವೇಳೆ ಶಾಸಕ ಸಿ.ಕೆ.ರಾಮಮೂರ್ತಿ, ರಾಜ್ಯ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ರವೀಂದ್ರ, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಮಾಜಿ ಪಾಲಿಕೆ ಸದಸ್ಯರುಗಳಾದ ಮೋಹನ್ ಕುಮಾರ್, ಬಾಬಿ ವೆಂಕಟೇಶ್, ದಾಸೇಗೌಡ, ಸಿ.ಎಂ.ರಾಜಪ್ಪ, ಕನಕಪುರ ರಾಜಣ್ಣ, ಕ್ರಾಂತಿರಾಜು ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ವಿ.ಸೋಮಣ್ಣ, ನನ್ನ ಜೀವನದಲ್ಲಿ ಸಿದ್ಧಗಂಗೆ ಶ್ರೀ ಶಿವಕುಮಾರ ಸ್ವಾಮೀಜಿ ಮತ್ತು ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಆಶೀರ್ವಾದದಿಂದ 45 ವರ್ಷಗಳಿಂದ ಜನಸೇವೆ ಮಾಡಲು ಸಾಧ್ಯವಾಗಿದೆ ಎಂದರು.

ಬೆಂಗಳೂರಿಗೆ ಹತ್ತಿರದಲ್ಲಿ ತುಮಕೂರು ಕ್ಷೇತ್ರವನ್ನು ಮಾದರಿ ಹೈಟೆಕ್ ಕ್ಷೇತ್ರವಾಗಿ ಮಾಡುವುದು ಹಾಗೂ ರಾಜ್ಯದ ರೈಲ್ವೆ ಯೋಜನೆಗಳ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಶ್ರಮಿಸುವುದಾಗಿ ಸೋಮಣ್ಣ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net