

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು, ಉಕ್ಕು ಹಾಗೂ ಬೃಹತ್ ಕೈಗಾರಿಕೆ ಇಲಾಖೆಯ ಸಚಿವರಾದ ಹಿನ್ನೆಲೆಯಲ್ಲಿ ಗಾಂಧಿ ಬಜಾರ್ ಪತ್ರಿಕಾ ವಿತರಕರು ಭಾನುವಾರ ರಾತ್ರಿ ಸಿಹಿ ಹಂಚಿ ಸಂಭ್ರಮಿಸಿದರು. ಪತ್ರಿಕಾ ವಿತರಕ ರಾಜಣ್ಣ ನೇತೃತ್ವದಲ್ಲಿ ಹತ್ತಾರು ವಿತರಕರು ಕುಮಾರಸ್ವಾಮಿ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ್ದರು.