ಕಸಾಪ ಅಧ್ಯಕ್ಷ ಸ್ಥಾನಕ್ಕೆ ಮಹೇಶ ಜೋಷಿ ರಾಜೀನಾಮೆ ಕೊಡಲಿ: ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್.ಬಸವರಾಜು ಒತ್ತಾಯ

Union of Folk and Street Drama Troupes press conference Mandya
Published on

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ ಜೋಷಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ ಸಾಮಾಜಿಕ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರು ಕಸಾಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್.ಬಸವರಾಜು ಒತ್ತಾಯಿಸಿದರು.

ಮಹೇಶ ಜೋಷಿ ಉದ್ಧಟತನ, ಸವಾರ್ಧಿಕಾರಿ ಧೋರಣೆ, ಕನ್ನಡ ನೆಲ, ಜಲ ಭಾಷೆಗಳಿಗೆ ಗೌರವ ತರುವಂತಹ ಎಳ್ಳಷ್ಟು ಕೆಲಸ ಮಾಡದೇ, ಕನ್ನಡ ಭಾಷೆ, ಸಾಹಿತ್ಯಕ್ಕೆ ಅಗೌರವ ತೋರುವವರಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಅವರ ವಿರುದ್ಧ ನ್ಯಾಯಾಲಯ ದಂಡ ವಿಧಿಸಿ ತೀರ್ಪು ಹೊರಸಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಲು ಮಹೇಶ ಜೋಷಿ ಮತ್ತೆ ಉದ್ದಟನ ತೋರಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದರೆ, ಕೇಂದ್ರ ಕಸಾಪ ಕಚೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಉಪಾಧ್ಯಕ್ಷ ಎನ್.ಶೇಖರ್, ಪ್ರಧಾನ ಕಾರ್ಯದರ್ಶಿ ಟಿ.ಎಂ.ನಾಗರಾಜು, ಸದಸ್ಯ ಎಚ್.ಪಿ.ವೈರಮುಡಿ, ರೋಸ್ ಮೇರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net