

ಮಂಡ್ಯ: ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳಿವಿಗಾಗಿ, ಶಾಂತಿ-ಸೌಹಾರ್ದತೆ-ಸಹಬಾಳ್ವೆಗಾಗಿ ಫೆ.15ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಸದಸ್ಯ ಗುರುಪ್ರಸಾದ್ ಕೆರಗೋಡು ತಿಳಿಸಿದರು.
ಅಂದು ಬೆಳಗ್ಗೆ 11 ರಿಂದ ಸಂಜೆ 4ರವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಚಿಂತಕ ದೇವನೂರು ಮಹಾದೇವ, ಸಾಹಿತಿ ಕಾಳೇಗೌಡ ನಾಗವಾರ, ಕೋಟಿಗಾನಹಳ್ಳಿ ರಾಮಯ್ಯ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯ ಜನತೆ ಧರ್ಮ, ದುಡಿಮೆ, ಹಸಿರೇ ಉಸಿರು. ಇಂತಹ ಪವಿತ್ರ ಧರ್ಮವನ್ನು ಪಲ್ಲಟಗೊಳಿಸುವ ಉಸಿರು ಕಟ್ಟಿಸುವ ಘಟನಾವಳಿಗಳಿಗೆ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಸಾಕ್ಷಿಯಾಗಿದೆ. ಕೆರಗೋಡಿನಲ್ಲಿ ಹತ್ತಿರುವ ನೆಲಹುಲ್ಲಿನ ಬೆಂಕಿ ಇಡೀ ಜಿಲ್ಲೆ ಹಾಗೂ ನಾಡಿಗೆ ಹರಡುವ ಮುನ್ನ ಬದುಕು ಮತ್ತು ಸಾಮರಸ್ಯವನ್ನು ಬಲಿ ತೆಗೆದುಕೊಳ್ಳುವ ಮುನ್ನ ನಾವು ನೀರು ಹಾಕುವ ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದರು.
ಒಕ್ಕೂಟದ ಟಿ.ಎಲ್.ಕೃಷ್ಣೇಗೌಡ, ಎನ್.ದೊಡ್ಡಯ್ಯ, ಲಕ್ಷ್ಮಣ್ ಚೀರನಹಳ್ಳಿ, ಪ್ರೊ.ಹುಲ್ಕೆರೆ ಮಹದೇವು, ಚಂದ್ರಶೇಖರ್, ವಿಜಯಕುಮಾರ್ ಇದ್ದರು.