ಪೊಲೀಸ್‌ ಇಲಾಖೆಯ ಏಕತಾ ಓಟ ಆಯೋಜನೆ

unity run
Published on

ಕಾರವಾರ: ಸರ್ದಾರ್ ವಲ್ಲಬಾಯ್ ಪಟೇಲ್ ಅವರ 150 ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿನ ಆಚರಿಸಲಾಗುತ್ತಿದ್ದು, ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಶುಕ್ರವಾರ ಏಕತಾ ಓಟ ಆಯೋಜಿಸಲಾಗಿತ್ತು.

ರವೀಂದ್ರನಾಥ ಟ್ಯಾಗೋರ್ ಕಡಲ ತೀರದಿಂದ ಪ್ರಾರಂಭವಾದ ಓಟದಲ್ಲಿ ಮಾಲಾದೇವಿ ಮೈದಾನದಲ್ಲಿ ಕೊನೆಗೊಂಡಿತು. ಸುರಿಯುವ ಮಳೆಯ ನಡುವೆ ನೂರಾರು ಜನ ಪಾಲ್ಗೊಂಡಿದ್ದರು. ಟ್ಯಾಗೋರ್ ಕಡಲ ತೀರದಲ್ಲಿ ಜಿಲ್ಲಾಽಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಓಟಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾ ವಚನವನ್ನು ಇದೇ ಸಂದರ್ಭದಲ್ಲಿ ಸ್ವೀಕರಿಸಲಾಯಿತು.

ಜಿಪಂ ಸಿಇಒ ಡಾ.ದಿಲೀಶ್ ಶಶಿ, ಎಸ್‌ಪಿ ದೀಪನ್ ಎಂ.ಎನ್., ಎಎಸ್‌ಪಿ ಕೃಷ್ಣಮೂರ್ತಿ, ದೇವರಾಜ್, ಡಿವೈಎಸ್‌ಪಿ ಗಿರೀಶ ಎಸ್.ವಿ., ವಿವಿಧ ಪೊಲೀಸ್ ಅಽಕಾರಿ, ಸಿಬ್ಬಂದಿ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪದಾಧಿಕಾರಿಗಳು, ಕಾಲೇಜ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net