

ಹರಪನಹಳ್ಳಿ: ದೇಶದ ಪ್ರತಿಯೊಬ್ಬ ನಾಗರಿಕ ರಾಷ್ಟ್ರಧ್ವಜಾರೋಹಣಕ್ಕೆ ಬೆಂಬಲ ಸೂಚಿಸುವ ದಿನವಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.
ಪಟ್ಟಣದ ಐಬಿ ವೃತ್ತದಲ್ಲಿ ತಾಲೂಕು ಆಡಳಿತ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಹರ್‌ಘರ್ ತಿರಂಗಾ ಅಭಿಯಾನದಲ್ಲಿ ಮಂಗಳವಾರ ಮಾತನಾಡಿದರು.
ದೇಶದಲ್ಲಿ ಜನಿಸಿದ ಪ್ರತಿಯೊಬ್ಬರಿಗೂ ದೇಶದ ಸಾರ್ವಭೌಮತ್ವ ಹಾಗೂ ಧ್ವಜಾರೋಹಣ ಬಗ್ಗೆ ಒಗ್ಗಟ್ಟಿನ ಸಂದೇಶ ರವಾನಿಸಿವುದು ಕರ್ತವ್ಯ ಎಂದರು. ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ್ ಬಿ.ವಿ.ಗಿರೀಶ್ ಬಾಬು,
ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್, ನೀರಾವರಿ ಇಲಾಖೆ ಎಇಇ ಕಿರಣ್ ನಾಯ್ಕ, ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷ್ಮೀ ಹತ್ತಿಕಾಳು, ಸಾರಿಗೆ ವ್ಯವಸ್ಥಾಪಕಿ ಮಂಜುಳಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ವಕೀಲ ವೆಂಕಟೇಶ್ ಇದ್ದರು.