ವಿವಿ ಕಾಲೇಜು: 80 ಕ್ಕೂ ಅಧಿಕ ಮಂದಿಯಿಂದ ರಕ್ತದಾನ

IMG-20220828-WA0032
Published on

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಎನ್ಎಸ್ಎಸ್, ವಿದ್ಯಾರ್ಥಿ ಸಂಘ, ಭಾರತೀಯ ರೆಡ್ ಕ್ರಾಸ್ ಮಂಗಳೂರು, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ, ಲೇಡಿಗೋಷನ್ ಆಸ್ಪತ್ರೆಗಳ ಸಹಯೋಗದೊಂದಿಗೆ ರವೀಂದ್ರ ಕಲಾಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.

ಶಿಬಿರ ಉದ್ಘಾಟಿಸಿದ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಆರೋಗ್ಯಾಧಿಕಾರಿ ಡಾ. ಜೆ ಎನ್ ಭಟ್, ರಕ್ತದಾನ ಸಮಾಜಕ್ಕೆ ಸಹಾಯ ಮಾಡುವ ಅತ್ಯಂತ ಸರಳ ವಿಧಾನ. ರಕ್ತದಾನದಿಂದ ಏನನ್ನೂ ಕಳೆದುಕೊಳ್ಳದೆ, ಅಮೂಲ್ಯ ಜೀವಗಳನ್ನು ಉಳಿಸುವ ಅವಕಾಶ ನಮ್ಮ ಕೈಯಲ್ಲಿದೆ ಎಂದರು.

ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮಾತನಾಡಿ, ಶೈಕ್ಷಣಿಕ ಕಾರ್ಯಚಟುವಟಿಕೆಗಳ ಒತ್ತಡದ ನಡುವೆಯೂ ರಕ್ತದಾನ ಶಿಬಿರ ಆಯೋಜಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ ಮೊದಲಾದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು, ಉಪನ್ಯಾಸಕರೂ ಸೇರಿದಂತೆ 80 ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ರಕ್ತದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net