ವಿಶ್ವವಿದ್ಯಾಲಯಗಳಿಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಲಿ; ಎಬಿವಿಪಿ ಪ್ರತಿಭಟನೆ

ABVP PROTES
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಸಂಚಾಲಕರು ಗುರುವಾರ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು. ಎಬಿವಿಪಿ ಜಿಲ್ಲಾ ಸಂಚಾಲಕರಾದ ಶಶಾಂಕ್ ಪಾಟೀಲ್, ಅಕ್ಷತಾ ಹಿರೇಮಠ, ಶೋಭಿತಾ, ಕಾವ್ಯಾ ನಗರ, ಪ್ರಫುಲ್, ಗುರುಬಸವ ಇತರರಿದ್ದರು.
Published on

ಕೊಪ್ಪಳ: ವಿಶ್ವ ವಿದ್ಯಾಲಯಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಸೇರಿ ಇತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ಸಂಚಾಲಕರು ಗುರುವಾರ ನಗರದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಬದಲಾವಣೆ, ಅಭಿವೃದ್ಧಿಗೆ ಶಿಕ್ಷಣ ಪ್ರಬಲ ಅಸ್ತ್ರ. ಆದರೆ, ವಿಶ್ವವಿದ್ಯಾಲಯಗಳು ಶಿಕ್ಷಣ ನೀಡುವಲ್ಲಿ ವಿಫಲವಾಗುತ್ತಿವೆ. ಸರ್ಕಾರ ಸಕಾಲಕ್ಕೆ ವಿವಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಅದರ ಭಾರವನ್ನು ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಸರ್ಕಾರ, ವಿವಿಗಳು ವಿದ್ಯಾರ್ಥಿಗಳ ಹಿತ ಕಾಯುತ್ತಿಲ್ಲ. ಮನಬಂದಂತೆ ಪರೀಕ್ಷಾ ಶುಲ್ಕ ವಸೂಲಿ, ಪರೀಕ್ಷೆ ನಡೆಸುವುದು, ಫಲಿತಾಂಶ ಪ್ರಕಟಿಸುತ್ತಿವೆ. ಅಂಕಪಟ್ಟಿಗಳು ಸಕಾಲಕ್ಕೆ ನಮ್ಮ ಕೈ ಸೇರುತ್ತಿಲ್ಲವೆಂದು ಆರೋಪಿಸಿದರು.

ತಕ್ಷಣ ಸರ್ಕಾರ ಎಲ್ಲ ವಿವಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಪರೀಕ್ಷೆ ಮುಗಿದ ನಂತರ ನಿಗದಿತ ಸಮಯಕ್ಕೆ ಫಲಿತಾಂಶ ಪ್ರಕಟಿಸಲು ಸರ್ಕಾರ ವಿವಿಗಳಿಗೆ ನಿರ್ದೇಶಿಸಬೇಕು. ಖಾಲಿ ಹುದ್ದೆ ಭರ್ತಿ ಮಾಡಬೇಕು. ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು. ವಿವಿಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕರಾದ ಶಶಾಂಕ್ ಪಾಟೀಲ್, ಅಕ್ಷತಾ ಹಿರೇಮಠ, ಶೋಭಿತಾ, ಕಾವ್ಯಾ ನಗರ, ಪ್ರಫುಲ್, ಗುರುಬಸವ, ಹಮ್ಮಿಗೇಶ, ನವೀನ್ ಪ್ರಸಾದ್, ಸಂತೋಷ, ಶಿವಾನಂದ, ಶಶಿಕಾಂತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net