

ಮಂಡ್ಯ: ತಾಲೂಕಿನ ಹನಕೆರೆ ಸಮೀಪ ಸೋಮವಾರ ಮಧ್ಯಾಹ್ನ ರೈಲು ಡಿಕ್ಕಿಯಾಗಿ ಅಪರಿಚಿತ ಮೃತಪಟ್ಟಿದ್ದಾನೆ.
ಸುಮಾರು 50 ರಿಂದ 55 ವರ್ಷದವನಾಗಿದ್ದು, 5.6 ಅಡಿ ಎತ್ತರ, ಸಾಧಾರಣ ಶರೀರ, ದುಂಡು ಮುಖವಿದೆ. ಮೃತನ ಮೈಮೇಲೆ ಸಿಮೆಂಟ್ ಕಪ್ಪು ಮಿಶ್ರಿತ ಕೆಂಪು ಗೆರೆ ಇರುವ ಫುಲ್ ಸ್ವೆಟರ್, ಅರ್ಧ ತೋಳಿನ ಬಿಳಿ ಬಣ್ಣದ ಬನಿಯನ್ ಇದೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿಡಲಾಗಿದೆ. ವಾರಸುದಾರರಿದ್ದರೆ ಮಂಡ್ಯ ರೈಲ್ವೆ ಪೊಲೀಸರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.