ರೈಲು ಡಿಕ್ಕಿ ಹೊಡೆದು ಅಪರಿಚಿತ ಸಾವು: ಮಂಡ್ಯ ರೈಲ್ವೆ ಠಾಣೆಯಲ್ಲಿ ಪ್ರಕರಣ

crime
Published on

ಮಂಡ್ಯ: ಪಾಂಡವಪುರ-ಬ್ಯಾಡರಹಳ್ಳಿ ಮಾರ್ಗದಲ್ಲಿ ರೈಲು ಡಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾನೆ.

ಸುಮಾರು 55 ವರ್ಷದವನಾಗಿದ್ದು, 5.6 ಅಡಿ ಎತ್ತರವಿದ್ದಾನೆ. ಧೃಡಕಾಯ ಶರೀರವಿದ್ದು, ಗೋಧಿ ಮೈಬಣ್ಣವಿದೆ. ಈತ ಕ್ರೀಂ ಬಣ್ಣದ ಗೆರೆವುಳ್ಳ ತುಂಬುತೋಳಿನ ಅಂಗಿ, ನೀಲಿ ಬಣ್ಣದ ಚಡ್ಡಿ ಧರಿಸಿದ್ದನು. ಶವವನ್ನು ಜಿಲ್ಲಾಸ್ಪತ್ರೆಯಲ್ಲಿಡಲಾಗಿದೆ. ವಾರಸುದಾರರಿದ್ದರೆ ಮಂಡ್ಯ ರೈಲ್ವೆ ಪೊಲೀಸರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net