ಬೆಡಸಗಾಂವ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

5 MND 1
Published on

ಮುಂಡಗೋಡ: ತಾಲೂಕಿನ ಬೆಡಸಗಾಂವ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಜೈದೇವ ನಾಯ್ಕ, ಉಪಾಧ್ಯಕ್ಷರಾಗಿ ಗಂಗಾಧರ ನಾಯ್ಕ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಡಸಗಾಂವ ಸಹಕಾರಿ ಸಂಘದ ಚುನಾವಣೆ ಇತ್ತೀಚೆಗೆ ನಡೆದಿತ್ತು. 11 ಸದಸ್ಯರ ಸಂಖ್ಯಾ ಬಲ ಹೊಂದಿರುವ ಸಂಘದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ಬುಧವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಜೈದೇವ ನಾಯ್ಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗಂಗಾಧರ ನಾಯ್ಕ ಇಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗುಡಿಕೇರಿ ಕಾರ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರದೀಪ ನಾಯ್ಕ ಹಾಗೂ ಸಂಘದ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net