

ಮಳವಳ್ಳಿ: ತಾಲೂಕಿನ ಪೂರಿಗಾಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ 10 ಸದಸ್ಯರು ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದರು.
ಗ್ರಾಮದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ 12 ನಿರ್ದೇಶಕ ಸ್ಥಾನಗಳ ಪೈಕಿ ವಿವಿಧ ಮೀಸಲಾತಿಯ 10 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು. ಎರಡು ಸ್ಥಾನಗಳಿಗೆ ಚುನಾವಣೆ ನಡೆಯಿತು. ಶಾಸಕ ಪಿ.ಎಂ. ನರೇಂದ್ರಸ್ವಾಮಿ , ರಾಜು ಮಹಂತಪ್ಪ, ಪಿ.ಮಲ್ಲಪ್ಪ, ಜ್ಯೋತಿ, ಮಹದೇವಸ್ವಾಮಿ, ಪುಟ್ಟಮ್ಮ, ಲೀಲಾವತಿ, ಗುರುಪ್ರಕಾಶ, ಬಸವರಾಜು, ರಾಜೇಂದ್ರ ಅವಿರೋಧವಾಗಿ ಆಯ್ಕೆಯಾದರು. ಎರಡು ಸ್ಥಾನಗಳಿಗೆ ಚುನಾವಣೆಯಲ್ಲಿ ಚಂದ್ರಶೇಖರ, ಚಿಕ್ಕಬಸವರಾಜು ಗೆಲುವು ಸಾಧಿಸಿದರು.