ಟಿ.ಎಂ.ಹೊಸೂರು ಗ್ರಾಪಂಗೆ ಅವಿರೋಧ ಆಯ್ಕೆ

ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಜಕ್ಕನಹಳ್ಳಿ ಶಿವಮೂರ್ತಿ ಅವರನ್ನು ಮುಖಂಡರು, ಬೆಂಬಲಿಗರು ಹಾಗೂ ಗ್ರಾಮಸ್ಥರು ಅಭಿನಂದಿಸಿದರು. ಮಹದೇವು, ದೇವರಾಜು, ಎಚ್.ಎಂ.ಬಸವರಾಜು, ನಟರಾಜು, ಚನ್ನನಕೆರೆ ಕೃಷ್ಣೇಗೌಡ, ಕುಮಾರಸ್ವಾಮಿ, ಶಿವಕುಮಾರ್ ಇತರರಿದ್ದರು.

Published on

ಶ್ರೀರಂಗಪಟ್ಟಣ: ತಾಲೂಕಿನ ಟಿ.ಎಂ.ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಕ್ಕನಹಳ್ಳಿ ಶಿವಮೂರ್ತಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 13 ಜನ ಸದಸ್ಯ ಬಲವಿರುವ ಟಿ.ಎಂ.ಹೊಸೂರು ಗ್ರಾಮ ಪಂಚಾಯಿತಿಯಲ್ಲಿ ರತ್ನಮ್ಮ ಅವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಖಾಲಿ ಇದ್ದ ಸ್ಥಾನಕ್ಕೆ ಬುಧವಾರ ಸದಸ್ಯ ಜಕ್ಕನಹಳ್ಳಿ ಶಿವಮೂರ್ತಿ ಒಬ್ಬರೆ ಅರ್ಜಿ ಸಲ್ಲಿಸಿ ಸ್ಪರ್ಧಿಸಿದ್ದು, ಆಯ್ಕೆ ಪ್ರಕ್ರಿಯೆ ವೇಳೆ ಜೆಡಿಎಸ್ ಬೆಂಬಲಿತ 6 ಜನ ಸದಸ್ಯರು ಗೈರಾಗಿದ್ದರು. ಕಾಂಗ್ರೆಸ್ ಬೆಂಬಲಿತ ಸದಸ್ಯರೊಂದಿಗೆ ಒಟ್ಟು 7 ಜನರ ಸರ್ವಾನುಮತ ಬೆಂಬಲದಿಂದ ಜಕ್ಕನಹಳ್ಳಿ ಶಿವಮೂರ್ತಿ ಅವರಿಗೆ ಅಧ್ಯಕ್ಷ ಸ್ಥಾನ ಒಲಿದಿದ್ದು, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅಕ್ಷರ ದಾಸೋಹ ಅಧಿಕಾರಿ ಮಂಚೇಗೌಡ ವಿಜೇತ ಅಭ್ಯರ್ಥಿಯ ಫಲಿತಾಂಶ ಪ್ರಕಟಿಸಿದರು.

ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಮಹದೇವು, ಎಪಿಎಂಸಿ ಮಾಜಿ ಅಧ್ಯಕ್ಷ ದೇವರಾಜು, ಗ್ರಾಪಂ ಮಾಜಿ ಅಧ್ಯಕ್ಷ ಎಚ್.ಎಂ.ಬಸವರಾಜು, ಮುಖಂಡರಾದ ನಟರಾಜು, ಚನ್ನನಕೆರೆ ಕೃಷ್ಣೇಗೌಡ, ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರಸ್ವಾಮಿ, ಶಿವಕುಮಾರ್, ಶಿವಮ್ಮ, ರತ್ನಮ್ಮ, ಮಹಾಲಕ್ಷ್ಮೀ ಇತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net