ಸೋಮವಾರಪೇಟೆ ಪತ್ರಕರ್ತರ ಸಂಘಕ್ಕೆ ಅವಿರೋಧ ಆಯ್ಕೆ

11spt1
ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ನಡೆದ ತಾಲೂಕು ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ವಿಶ್ವ ಕುಂಬೂರು ಅಧಿಕಾರ ವಹಿಸಿಕೊಂಡರು. ವಿಜಯ್, ರವೀಂದ್ರ, ವಿಜೇತ್, ಭಾಸ್ಕರ್ ಇದ್ದರು.
Published on

ಸೋಮವಾರಪೇಟೆ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ವಿಶ್ವ ಕುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಕೆ.ಭಾಸ್ಕರ್ ಅವಿರೋಧ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಎಸ್.ಡಿ.ವಿಜೇತ್, ಖಚಾಂಚಿಯಾಗಿ ಬಿ.ಎ.ಭಾಸ್ಕರ್, ನಿರ್ದೇಶಕರಾಗಿ ವಿಜಯ್ ಹಾನಗಲ್ಲು, ಚೆರಿಯಮನೆ ಸುರೇಶ್, ಹಿರಿಕರ ರವಿ, ದಿನೇಶ್ ಮಾಲಂಬಿ, ಲಕ್ಮೀಕಾಂತ್ ಕೊಮಾರಪ್ಪ ಆಯ್ಕೆಯಾದರು.

ಶನಿವಾರ ಪತ್ರಿಕಾಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸೋಮವಾರಪೇಟೆ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನ ಸಿಇಒ ರವೀಂದ್ರ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ನವೀನ್ ಸುವರ್ಣ ವೀಕ್ಷಕರಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ವಿಜಯ್ ಹಾನಗಲ್ಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಶ್ವ ಕುಂಬೂರು ಅಧಿಕಾರ ವಹಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net