ಅಹಿತಕರ ಘಟನೆ ಸಂಭವಿಸದಿರಲಿ

web1
ಚಿಕ್ಕೋಡಿ ಲೋಕೋಪಯೋಗಿ ಸಭಾಭವನದಲ್ಲಿ ಗಣೇಶ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಮಾತನಾಡಿದರು. ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ, ಚಿದಂಬರ ಕುಲಕರ್ಣಿ, ವಿಶ್ವನಾಥ ಚೌಗಲೆ ಇತರರಿದ್ದರು.
Published on

ಚಿಕ್ಕೋಡಿ: ಗಣೇಶ ಮಂಡಳಿಗಳು ಸರ್ಕಾರದ ಮಾರ್ಗಸೂಚಿಸಿ ಪಾಲಿಸುವ ಮೂಲಕ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಹೇಳಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗಣೇಶ ಉತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಯಾವುದೇ ಅಹಿತಕರ ಘಟನೆ ಜರುಗದಂತೆ ಎಚ್ಚರವಹಿಸಿಬೇಕು. ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಟಾಪಿಸಬೇಕು. ಹಸಿರು ಪಟಾಕಿಗಳನ್ನು ಬಳಸಬೇಕು ಎಂದರು.

ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ ಮಾತನಾಡಿ, ಭಾವೈಕ್ಯತೆಯಿಂದ ಹಬ್ಬ ಆಚರಿಸಬೇಕು. ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸಲು ಅನುಮತಿ ಕಡ್ಡಾಯ ಪಡೆದುಕೊಳ್ಳುಬೇಕು. ಡಾಲ್ಬಿ ಬಳಸಬಾರದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಪುರಸಭೆ ಮಾಜಿ ಅಧ್ಯಕ್ಷ ರಾಮಾ ಮಾನೆ ಮಾತನಾಡಿದರು. ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಸಿಪಿಐ ವಿಶ್ವನಾಥ ಚೌಗಲೆ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತ ಸುಪ್ರಭಾ ಬಂಡಗಾರ, ತಾಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಶಿವಾನಂದ ಶಿರಗಾಂವಿ, ಅಗ್ನಿಶಾಮಕ ಠಾಣಾಧಿಕಾರಿ ಅನುರಾಗ ಬಿ.ಎಲ್., ಪಿಎಸ್‌ಐ ಬಸಗೌಡ ನೇರ್ಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net