

ಮೈಸೂರು: ಜನಸ್ಪಂದನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಟಾಚಾರಕ್ಕೆ ಮಾಡುತ್ತಿದ್ದಾರೆ. ‘ಇದೊಂದು ಬೋಗಸ್ ದರ್ಶನ’ ಎಂಬ ವಿಪಕ್ಷ ನಾಯಕ ಅಶೋಕ ಹೇಳಿಕೆಯನ್ನು ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್ ಖಂಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆದು ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಈಗ ಜನಸ್ಪಂದನ ಮೂಲಕ ಜನರ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುತ್ತಿದ್ದಾರೆ. ಇದನ್ನು ಸಹಿಸದೆ ಬಿಜೆಪಿಯವರು ಇಲ್ಲಸಲ್ಲದ ಟೀಕೆ ಮಾಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.