

ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ೂಷಣೆ ಮಾಡಿರುವ ಒಳ ಮೀಸಲಾತಿ ಅವೈಜ್ಞಾನಿಕವಾಗಿದೆ. ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ.1ರಷ್ಟು, ಬೋವಿ, ಕೊರಚಾ, ಕೊರಮ, ಲಂಬಾಣಿ ಸಮುದಾಯಗಳಿಗೆ ಕನಿಷ್ಠ ಶೇ.5ರಷ್ಟು ಒಳ ಮೀಸಲಾತಿ ೂಷಿಸಬೇಕು ಎಂದು ಆಗ್ರಹಿಸಿ ಸೆ.10 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ಪ್ರತಿಭಟನೆ ಕೈಗೊಳ್ಳಲಿದ್ದೇವೆ ಎಂದು ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ದೌರ್ಜನ್ಯ ಸಮಿತಿ ಸದಸ್ಯ ಒಬದೇನಹಳ್ಳಿ ಮುನಿಯಪ್ಪ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಹಲವು ವರ್ಷಗಳ ಹೋರಾಟಕ್ಕೆ ಪ್ರತಿಫಲವಾಗಿ ಕಾಂಗ್ರೆಸ್ ಈಗಾಗಲೇ ಒಳ ಮೀಸಲಾತಿ ಜಾರಿಗೊಳಿಸಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ಮಾಧುಸ್ವಾಮಿ ಅವರ ನೇತೃತ್ವದಲ್ಲಿ ಒಳ ಮೀಸಲಾತಿ ಕುರಿತು ಎಡಗೈ ಸಮುದಾಯಕ್ಕೆ ಶೇ.6, ಬಲಗೈ ಸಮುದಾಯಕ್ಕೆ ಶೇ.5.5, ಭೋವಿ, ಕೊರಚಾ, ಕೊರಮ, ಲಂಬಾಣಿ ಸೇರಿ ಇತರೆ ಸಮುದಾಯಗಳಿಗೆ ಶೇ.4.5 ಹಾಗೂ ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲಾತಿ ನೀಡುವಂತೆ ಸಮಿತಿ ಶಿಫಾರಸ್ಸು ಮಾಡಿತ್ತು. ಸಮಿತಿಯ ಶಿಫಾರಸ್ಸನ್ನು ಯಥಾವತ್ತಾಗಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿಯಲ್ಲಿ ಶಿಫಾರಸ್ಸು ಮಾಡಿದ್ದರು. ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಕಾಂಗ್ರೆಸ್ ಯಾವುದೇ ಶಿಫಾರಸ್ಸು, ಆದೇಶಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಒಳ ಮೀಸಲಾತಿ ಜಾರಿಗೊಳಿಸಿದೆ. ಇದರಿಂದ ಪರಿಶಿಷ್ಟ ಸಮುದಾಯಗಳ ನಡುವೆ ಗೊಂದಲಕ್ಕೆ ಕಾರಣವಾಗಿದೆ ಎಂದರು.
ಬೋವಿ ಸಮಾಜ ಒಳಗೊಂಡಂತೆ ಇತರ ಸಮುದಾಯಗಳಿಗೆ ಕನಿಷ್ಠ ಶೇ.5 ರಷ್ಟು ಒಳ ಮೀಸಲಾತಿ ಜಾರಿಗೊಳಿಸಬೇಕಿದೆ. ಭೋವಿ ಸಮುದಾಯದ ಜತೆಗೆ 59 ಉಪಜಾತಿಗಳನ್ನು ಸೇರಿಸಲಾಗಿದೆ. ಇದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಸೆ.10 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದರು.