ಅವಕಾಶ ಸಿಕ್ಕಾಗ ಪ್ರತಿಭೆ ಅನಾವರಣಗೊಳಿಸಿ

nrp college
ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಇತರ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿದರು. ಪ್ರಶಾಂತ್ ಎಲ್. ಶೆಟ್ಟಿ, ಜುಬೇದಾ, ಡಾ. ಧನಂಜಯ, ಕಿರಣ್, ಬಿನು, ಕೆ.ಸುರೇಶ್, ದೇವಂತ್‌ರಾಜ್, ಸೇವಿಯಾರ್, ಅಶ್ವಿನ್, ಶಶಿಧರ್, ಡಿ.ನಾಗೇಶ್‌ಗೌಡ ಇದ್ದರು.
Published on

ಎನ್.ಆರ್.ಪುರ: ವಿದ್ಯಾರ್ಥಿಗಳು ಪ್ರತಿಭೆಯನ್ನು ಅವಕಾಶ ಸಿಕ್ಕಾಗ ಅನಾವರಣಗೊಳಿಸಿದರೆ ಭವಿಷ್ಯ ಉಜ್ವಲಗೊಳ್ಳುತ್ತದೆ ಎಂದು ಶಿವಮೊಗ್ಗ ಡಿವಿಎಸ್ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಹೇಳಿದರು.

ಸೋಮವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಇತರ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ನಮಿಸುವ ಕೈಗಳಿಗಿಂತ ದುಡಿಯುವ ಕೈಗಳೇ ಮುಖ್ಯ. ಆದರೆ ಅತಿಯಾದ ಮೊಬೈಲ್ ಬಳಕೆಯಿಂದ ಕೈಗಳು ಸೋಮಾರಿಗಳಾಗುತ್ತಿವೆ. ವಿದ್ಯಾರ್ಥಿಗಳು ಮಿತಿಯಲ್ಲಿ ಮೊಬೈಲ್ ಬಳಸಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಎಲ್. ಶೆಟ್ಟಿ ಮಾತನಾಡಿ, ಕಾಲೇಜಿನ ರಂಗಮಂದಿರ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ ನೀಡುವಂತೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ಶ್ರೀನಿವಾಸ್ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದಾ ಮಾತನಾಡಿ, ವಿದ್ಯಾರ್ಥಿಗಳು ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ಕಲಿತ ಕಾಲೇಜನ್ನು ಮರೆಯಬಾರದು. ಪ್ರತಿಯೊಬ್ಬರೂ ಮಾನವೀಯತೆ ಬೆಳೆಸಿಕೊಳ್ಳಬೇಕು ಎಂದರು.
ಕಳೆದ ವರ್ಷ ಬಿಎಸ್‌ಡಬ್ಲುೃವಿಯಲ್ಲಿ 2ನೇ ರ‌್ಯಾಂಕ್ ಪಡೆದ ಇಸ್ರಿತ್ ಬಾನು ಅವರನ್ನು ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಕಾಲೇಜಿನ ಪ್ರಾಚಾರ್ಯ ಡಾ. ಧನಂಜಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕಿರಣ್, ಬಿನು, ಕೆ.ಸುರೇಶ್, ದೇವಂತ ರಾಜ್, ಸೇವಿಯಾರ್, ಅಶ್ವಿನ್, ಶಶಿಧರ್, ಶಿಲ್ಪಾ, ಡಿ.ನಾಗೇಶ ಗೌಡ, ಡಾ. ಜೆ.ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net