ದೇವಿ ಸಂಕಲ್ಪದಿಂದ ಕಾರ್ಯ ಸಿದ್ಧಿ

pdb-4
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಹಳೇ ಮಾರಿಯಮ್ಮನ ಗದ್ದುಗೆ ಪೂಜೆ ಪ್ರಸಾದ ಇವತ್ತು ನನ್ನನ್ನು ಈ ಹಂತಕ್ಕೆ ತಂದು ನಿಲ್ಲಿಸಿದೆ, ಹಾಗಾಗಿ ತಾಯಿ ಮಾಡಿಸ್ತಾಳೆ ಎಂಬ ನಂಬಿಕೆಯಿಂದ ಹೆಜ್ಜೆ ಇಟ್ಟಾಗ ಉಳಿದೆಲ್ಲವನ್ನು ಅವಳೇ ಮುಂದುವರಿಸಿಕೊಂಡು ಹೋಗುತ್ತಾಳೆ. ಆದ್ದರಿಂದ ಸಂಕಲ್ಪ ಮಾಡಿದರೆ ಸಿದ್ಧಿಯಾಗುವ ಸಮಯ ತುಂಬಾ ದೂರವಿಲ್ಲ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಕಾಪು ಹಳೇ ಮಾರಿಯಮ್ಮ ದೇವಸ್ಥಾನ ವಠಾರದಲ್ಲಿ ಮಂಗಳವಾರ ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನ ಸಮಗ್ರ ಜೀರ್ಣೋದ್ಧಾರ ಮಹಾಸಂಕಲ್ಪಕ್ಕೆ ಪೂರ್ವಭಾವಿಯಾಗಿ ಜೀರ್ಣೋದ್ಧಾರ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನ, ಜೀರ್ಣೋದ್ಧಾರ ಲಾಂಛನ ಅನಾವರಣ, ಸಮಸ್ತ ಭಕ್ತರಿಗೆ ಕಾಣಿಕೆ ಡಬ್ಬಿ ವಿತರಣೆಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಮಾತಾನಾಡಿ, ಕಾಪು ಸುಗ್ಗಿ ಮಾರಿಪೂಜೆ ಕಾಪುವಿಗೆ ನಾಡಹಬ್ಬ, ಜಿಎಸ್‌ಬಿ ಸಮಾಜ ನೂರಾರು ಕೋಟಿ ರೂ. ಶೈಕ್ಷಣಿಕ ಧಾರ್ಮಿಕ ವೈದ್ಯಕೀಯ ರಂಗಕ್ಕೆ ನೀಡಿದೆ ಹಾಗಾಗಿ ಇವತ್ತಿನ ಮೂಲಧನ ಸಂಗ್ರಹ ಕೂಡ ಅತ್ಯಂತ ಯಶಸ್ವಿಯಾಗಿ ನಡೆಯುವುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ದೇವಸ್ಥಾನ ಆಡಳಿತ ಮೊಕ್ತೇಸರ ಪ್ರಸಾದ್ ಗೋಕುಲ್‌ದಾಸ್ ಶೆಣೈ ಮಾತನಾಡಿದರು. ದೇವಸ್ಥಾನ ಪ್ರಧಾನ ಅರ್ಚಕ ಕೆ.ಕಮಲಾಕ್ಷ ಭಟ್, ಮಂಗಳೂರು ವೆಂಕಟರಮಣ ದೇವಸ್ಥಾನ ತಂತ್ರಿ ಡಾ.ಎಂ.ಪಂಡಿತ್ ನರಸಿಂಹ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಆಡಳಿತ ಮೊಕೇಸರ ಶ್ರೀಧರ ಆನಂದ್ರಾಯ ಶೆಣೈ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಜಿಎಸ್‌ಬಿ ಸರ್ವ ದೇವಸ್ಥಾನ ಒಕ್ಕೂಟ ಅಧ್ಯಕ್ಷ ಅಜಿತ್ ಕುಡ್ವ ಮೂಲ್ಕಿ, ಪ್ರಮುಖರಾದ ಮನೋಹರ್ ಎಸ್.ಶೆಟ್ಟಿ ಕಾಪು, ಕೆ.ವಾಸುದೇವ ಶೆಟ್ಟಿ, ವಿಕ್ರಂ ಕಾಪು, ಮೋಹನ್ ಎಂ.ಬಂಗೇರ, ಲಕ್ಷ್ಮೀನಾರಾಯಣ ನಾಯಕ್ ಕಾಪು, ಡಾ.ಕೆ.ನಾಗಾನಂದ ಭಟ್ ಉಪಸ್ಥಿತರಿದ್ದರು. ಡಾ.ಸದಾನಂದ ಭಟ್ ಕಾರ್ಯಕ್ರಮ ನಿರೂಪಿಸಿದರು.

ಲಕ್ಷಾಂತರ ಭಕ್ತರ ಬಹು ಕಾಲದ ಕನಸಾದ ಹಳೇ ಮಾರಿಯಮ್ಮ ಸನ್ನಿಧಾನದ ಜೀರ್ಣೋದ್ಧಾರ ಮತ್ತು ಸುತ್ತುಪೌಳಿ ಪುನಃ ನಿರ್ಮಾಣ ಉದ್ದೇಶದೊಂದಿಗೆ ಶ್ರೀ ಕಾಶೀ ಮಠಾಧೀಶ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ 2023ರಲ್ಲಿ ಮುಷ್ಟಿಕಾಣಿಕೆ ಸಮರ್ಪಣೆ ಮೂಲಕ ಚಾಲನೆ ನೀಡಲಾಗಿತ್ತು. ಈಗ ಕಾಪು ಪೇಟೆಯ ಹತ್ತು ಸಮಸ್ತರು ಮತ್ತು ಮಾರಿಯಮ್ಮ ದೇವರ ಸಮಸ್ತ ಭಕ್ತರ ಅಪೇಕ್ಷೆಯಂತೆ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. -ಪ್ರಸಾದ್ ಗೋಕುಲ್‌ದಾಸ್ ಶೆಣೈ ದೇವಸ್ಥಾನ ಆಡಳಿತ ಮೊಕ್ತೇಸರ https://www.vijayavani.net/direct-job-recruitment-for-the-youth-of-koraga https://www.vijayavani.net/silver-prabhavali-peetha-dedication

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net