ಸಹಪಠ್ಯ ಚಟುವಟಿಕೆಯಿಂದ ಪ್ರತಿಭೆ ಅನಾವರಣ

19ark2
ಅರಕಲಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಹಪಠ್ಯ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಡಾ.ಅಶೋಕ್, ಬಾಲಾಜಿ, ರವಿಕುಮಾರ್ ಇತರರಿದ್ದರು.
Published on

ಅರಕಲಗೂಡು: ಸಹಪಠ್ಯ ಚಟುವಟಿಕೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಹಾಗೂ ಪ್ರತಿಭೆ ಅನಾವರಣಕ್ಕೆ ಅತ್ಯುತ್ತಮ ವೇದಿಕೆಯಾಗಿದೆ ಎಂದು ಹಾಸನದ ಲೆಕ್ಕಪತ್ರ ಇಲಾಖೆ ಹಿರಿಯ ಉಪನಿರ್ದೇಶಕ ಡಾ.ಎಚ್.ಇ.ಅಶೋಕ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೇ ಮೆಲುಕು ಹೊಸ ಮೆರುಗು ಎಂಬ ಶೀರ್ಷಿಕೆಯಡಿ ಇತ್ತೀಚೆಗೆ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಂಡಾಗ ಬದುಕಿನ ವಿವಿಧ ಮಜಲುಗಳ ಅನುಭವ ಗಳಿಸಲು ಸಾಧ್ಯವಾಗುತ್ತದೆ ಎಂದರು.

ಸಿಡಿಸಿ ಉಪಾಧ್ಯಕ್ಷ ಎ.ಆರ್.ಬಾಲಾಜಿ, ಸದಸ್ಯ ರವಿಕುಮಾರ್ ಮಾತನಾಡಿದರು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪಡೆದ ಸಹಾಯಕ ಪ್ರಾಧ್ಯಾಪಕ ಕುಮಾರ್ ಅವರನ್ನು ಗೌರವಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ವೆಂಕಟೇಶ್, ನಿರ್ಮಲಾ ಕುಮಾರಿ, ಚಿದಂಬರ ಬಾಬು, ಉಪನ್ಯಾಸಕರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net